ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೋವಿಡ್-19: ಕೇರಳದಲ್ಲಿ 19 ಮಂದಿ ಸೇರಿ ದೇಶದಾದ್ಯಂತ 33 ಸಾವು, 4,510 ಹೊಸ ಪ್ರಕರಣ

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 4,510 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,45,47,599 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಬುಧವಾರ ತಿಳಿಸಿದೆ.

ಸಾಂದರ್ಭಿಕ ಚಿತ್ರ
Ramyashree GN
Updated On : 21 Sept 2022, 11:10 am

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 4,510 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,45,47,599 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಬುಧವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಸದ್ಯ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 46,216 ಕ್ಕೆ ಇಳಿಕೆಯಾಗಿದೆ. ಇದೇ ಅವಧಿಯಲ್ಲಿ ಕೇರಳದಲ್ಲಿ 19 ಮಂದಿ ಸೇರಿದಂತೆ 33 ಜನರು ಸಾವಿಗೀಡಾಗಿದ್ದಾರೆ. ಈ ಮೂಲಕ ಈವರೆಗೆ ದೇಶದಾದ್ಯಂತ 5,28,403 ನಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.12ರಷ್ಟು ಸಕ್ರಿಯ ಪ್ರಕರಣಗಳಿದ್ದು,ರಾಷ್ಟ್ರೀಯ ಕೋವಿಡ್ ಚೇತರಿಕೆ ದರವು ಶೇ 98.71ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

Advertisement

Advertisement

ಇದನ್ನೂ ಓದಿ: ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 220 ಸೇರಿ ರಾಜ್ಯದಲ್ಲಿ 368 ಮಂದಿಗೆ ಪಾಸಿಟಿವ್; ಇಬ್ಬರು ಸಾವು

ದೈನಂದಿನ ಪಾಸಿಟಿವಿಟಿ ದರ ಶೇ 1.33 ರಷ್ಟಿದ್ದರೆ, ಮರಣ ಪ್ರಮಾಣ 1.19ರಷ್ಟಿದೆ. ಸದ್ಯ ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ ಈವರೆಗೆ 216.95 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement