ದೇಶ

2024ರ ಲೋಕಸಭಾ ಚುನಾವಣೆ: ಲಾಲು, ನಿತೀಶ್ ಶೀಘ್ರ ಸೋನಿಯಾ ಗಾಂಧಿ ಭೇಟಿ

Lingaraj Badiger

ಪಾಟ್ನಾ: 2024 ರ ಲೋಕಸಭೆ ಚುನಾವಣೆಗೆ ಮುನ್ನ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದ ಭಾಗವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಶೀಘ್ರದಲ್ಲೇ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡುವುದಾಗಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಗುರುವಾರ ಹೇಳಿದ್ದಾರೆ.

ಜನರು ಎದುರಿಸುತ್ತಿರುವ ನೈಜ ಸಮಸ್ಯೆಗಳನ್ನು ಮರೆಮಾಚಲು ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಕದಡಲು ಬಿಜೆಪಿ ಬಯಸುತ್ತಿದೆ ಎಂದು ಲಾಲು ಪ್ರಸಾದ್ ಯಾದವ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇಂದು ತಮ್ಮ ಪಕ್ಷದ ರಾಜ್ಯ ಪರಿಷತ್ ಸಭೆಯಲ್ಲಿ ಮಾತನಾಡಿದ ಲಾಲು, "ನಾನು ನಿತೀಶ್ ಕುಮಾರ್ ಜಿ ಅವರೊಂದಿಗೆ ದೆಹಲಿಯಲ್ಲಿ ಸೋನಿಯಾ(ಗಾಂಧಿ) ಜಿ ಅವರನ್ನು ಭೇಟಿ ಮಾಡುತ್ತೇನೆ. ಅವರ 'ಪಾದಯಾತ್ರೆ' ಮುಗಿದ ನಂತರ ನಾನು ರಾಹುಲ್ ಗಾಂಧಿಯವರನ್ನೂ ಭೇಟಿ ಮಾಡುತ್ತೇನೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಒಗ್ಗಟ್ಟು ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲಿದೆ ಎಂದಿದ್ದಾರೆ. 

ಬಿಹಾರದ ಸೀಮಾಂಚಲ್ ಪ್ರದೇಶಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮುಂಬರುವ ಭೇಟಿಯ ಬಗ್ಗೆ ಜನ ಜಾಗರೂಕರಾಗಿರಬೇಕು ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

ರಾಜ್ಯದಲ್ಲಿ ವಿವಿಧ ಸಮುದಾಯಗಳ ಜನರನ್ನು ಪರಸ್ಪರ ಬಡಿದಾಡಿಕೊಳ್ಳಲು ಬಿಜೆಪಿ ನಾಯಕರು ಪ್ರಚೋದಿಸಬಹುದು ಎಂದು ಲಾಲು ಪ್ರಸಾದ್ ಯಾವಲ್ ಎಚ್ಚರಿಕೆ ನೀಡಿದ್ದಾರೆ.

SCROLL FOR NEXT