ಪ್ರಾತಿನಿಧಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್, 2 ಕಿಮೀ ದೂರ ಬೆತ್ತಲೆಯಾಗಿ ನಡೆದುಕೊಂಡು ಬಂದ ಸಂತ್ರಸ್ತೆ

15 ವರ್ಷದ ಬಾಲಕಿಯನ್ನು ಅಪಹರಿಸಿದ ಐವರು ವ್ಯಕ್ತಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಮನೆಯನ್ನು ತಲುಪಲು ಮೊರಾದಾಬಾದ್-ಠಾಕುರ್ದ್ವಾರಾದಲ್ಲಿ ಸುಮಾರು ಎರಡು ಕಿಲೋಮೀಟರ್ ವರೆಗೆ ಬೆತ್ತಲೆಯಾಗಿ ನಡೆದುಕೊಂಡು ಹೋದ ಆಘಾತಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮೊರಾದಾಬಾದ್: 15 ವರ್ಷದ ಬಾಲಕಿಯನ್ನು ಅಪಹರಿಸಿದ ಐವರು ವ್ಯಕ್ತಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಮನೆಯನ್ನು ತಲುಪಲು ಮೊರಾದಾಬಾದ್-ಠಾಕುರ್ದ್ವಾರಾದಲ್ಲಿ ಸುಮಾರು ಎರಡು ಕಿಲೋಮೀಟರ್ ವರೆಗೆ ಬೆತ್ತಲೆಯಾಗಿ ನಡೆದುಕೊಂಡು ಹೋದ ಆಘಾತಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬಾಲಕಿಗೆ ಸಹಾಯ ಮಾಡುವ ಬದಲು, ಕೆಲವರು ಮೂಕ ಪ್ರೇಕ್ಷಕರಾಗಿ ನಿಂತಿದ್ದರೆ, ಮತ್ತೆ ಕೆಲವರು ವಿಡಿಯೋಗಳನ್ನು ಚಿತ್ರೀಕರಿಸುವಲ್ಲಿ ಬ್ಯುಸಿಯಾಗಿದ್ದರು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.

ವರದಿಗಳ ಪ್ರಕಾರ, ಈ ಘಟನೆಯು ಹದಿನೈದು ದಿನಗಳ ಹಿಂದೆ ನಡೆದಿದೆ. ಆದರೆ, ವಿಡಿಯೋ ಇದೀಗ ವೈರಲ್ ಆಗಿದೆ.

ಸಂತ್ರಸ್ತೆ ಮನೆಗೆ ಹಿಂತಿರುಗಿದಾಗ ತೀವ್ರ ರಕ್ತಸ್ರಾವದಿಂದ ಬಳಸುತ್ತಿದ್ದಳು. ಈ ವಿಚಾರವನ್ನು ನಮಗೆ ತಿಳಿಸಿದಳು. ನಂತರ ದೂರು ದಾಖಲಿಸಲು ಪೊಲೀಸರನ್ನು ಸಂಪರ್ಕಿಸಿದ್ದೆವು. ಆದರೆ, ಈ ವಿಷಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್ ಕುಟಿಯಾಲ್ ಅವರ ಮುಂದೆ ಪ್ರಸ್ತಾಪಿಸುವವರೆಗೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಆಕೆಯ ಚಿಕ್ಕಪ್ಪ ಆರೋಪಿಸಿದ್ದಾರೆ.

ಇದಾದ ಬಳಿಕ ಸೆಪ್ಟೆಂಬರ್ 7 ರಂದು ಪೊಲೀಸರು ಎಫ್ಐಆರ್ ದಾಖಲಿಸಿದರು. ನಂತರ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯ ಕುಟುಂಬ ಸದಸ್ಯರು ತನಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರುದಾರರು ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.

ಮೊರಾದಾಬಾದ್ ಪೊಲೀಸರ ಪ್ರಕಾರ, ಹುಡುಗಿ ಪಕ್ಕದ ಹಳ್ಳಿಯಲ್ಲಿ ನಡೆಯುತ್ತಿದ್ದ ಜಾತ್ರೆಗೆ ತೆರಳಿದ್ದಾಗ ಐವರು ಆಕೆಯನ್ನು ಅಪಹರಿಸಿದ್ದಾರೆ. ಬಳಿಕ ಅತ್ಯಾಚಾರ ಮಾಡಲು ಮುಂದಾಗಿದ್ದಾರೆ. ಸಂತ್ರಸ್ತೆಯ ಕಿರುಚಾಟವನ್ನು ಕೇಳಿದ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದರು. ಆದರೆ, ಅಷ್ಟರಲ್ಲಿ ಐವರು ಆರೋಪಿಗಳು ಆಕೆಯ ಬಟ್ಟೆ ಮತ್ತು ಇತರ ವಸ್ತುಗಳನ್ನು ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದರು ಎಂದು ತಿಳಿಸಿದ್ದಾರೆ.

ಗ್ರಾಮೀಣ ವಿಭಾಗದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಕುಮಾರ್ ಮೀನಾ ಮಾತನಾಡಿ, 'ಐಪಿಸಿ ಸೆಕ್ಷನ್ 376 ಡಿ (ಗ್ಯಾಂಗ್ ರೇಪ್) ಮತ್ತು ಪೊಕ್ಸೊ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳ ಪೈಕಿ ಒಬ್ಬನನ್ನು ಸೆಪ್ಟೆಂಬರ್ 15 ರಂದು ಬಂಧಿಸಿದ್ದೇವೆ. ಸದ್ಯ ಹೆಚ್ಚಿನ ತನಿಖೆ ನಡೆಯುತ್ತಿದೆ' ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT