ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 5,300 ಸೋಂಕಿತರು ಪತ್ತೆ, 20 ಸಾವು

Srinivasamurthy VN

ನವದೆಹಲಿ: ದೇಶದಲ್ಲಿ ಕೋವಿಡ್ ಸಾಂಕ್ರಾಮಿಕದ ಏರಿಳಿತ ಮುಂದುವರೆದಿದ್ದು, 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 5,300 ಸೋಂಕಿತರು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 20 ಸೋಂಕಿತರು ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 5,300 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4,45,58,425 ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ 20 ಸೋಂಕಿತರು ಸಾವನ್ನಪ್ಪಿದ್ದು, ಈವರೆಗೆ ಸೋಂಕಿನಿಂದ 5,28,449 ಜನರು ಮೃತಪಟ್ಟಿರುವುದಾಗಿ ಸಚಿವಾಲಯ ತಿಳಿಸಿದೆ.

24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 6,424 ಮಂದಿ ಸೋಂಕಿತರು ಗುಣಮುಖರಾಗಿದ್ದು, ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 45,281ಕ್ಕೆ ಇಳಿಕೆಯಾಗಿದೆ.

SCROLL FOR NEXT