ಕೇರಳ ಪೊಲೀಸರು 
ದೇಶ

ಕೇರಳ: ಪಿಎಫ್‌ಐ ಪ್ರತಿಭಟನೆ, ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಹೈಕೋರ್ಟ್

ಎನ್ಐಎ ದಾಳಿ ವಿರೋಧಿಸಿ ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂದ್ ಗೆ ಘೋಷಣೆ ನೀಡಿದ ನಂತರ ಕೇರಳ ರಾಜ್ಯದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಹೈಕೋರ್ಟ್ ಶುಕ್ರವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ತಿರುವನಂತಪುರಂ: ಎನ್ಐಎ ದಾಳಿ ವಿರೋಧಿಸಿ ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂದ್ ಗೆ ಘೋಷಣೆ ನೀಡಿದ ನಂತರ ಕೇರಳ ರಾಜ್ಯದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಹೈಕೋರ್ಟ್ ಶುಕ್ರವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಬಂದ್ ನ್ನು ಈ ಹಿಂದೆಯೇ ನಿಷೇಧಿಸಲಾಗಿತ್ತು, ಸಾರ್ವಜನಿಕ ಆಸ್ತಿ ನಾಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಬಂದ್ ನಿಷೇಧಿಸುವ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆಯೂ ನ್ಯಾಯಾಲಯವು ರಾಜ್ಯಡಳಿತಕ್ಕೆ ಹೇಳಿದೆ. ಹಿಂಸಾಚಾರವನ್ನು ನಿಲ್ಲಿಸಲು ಸಾಧ್ಯವಿರುವ ಎಲ್ಲ ವಿಧಾನಗಳನ್ನು ಬಳಸುವಂತೆ ಅದು ಸರ್ಕಾರಕ್ಕೆ ಸೂಚಿಸಿದೆ.

ಶುಕ್ರವಾರ ಬೆಳಗ್ಗೆಯಿಂದ ಕೇರಳದ ವಿವಿಧ ಭಾಗಗಳಲ್ಲಿ ಪಿಎಫ್‌ಐ ಕರೆ ನೀಡಿರುವ ಬಂದ್ ನಿಂದಾಗಿ ಕಲ್ಲು ತೂರಾಟ ಸೇರಿದಂತೆ ಅಲ್ಲಲ್ಲಿ ಹಿಂಸಾಚಾರದ ಘಟನೆಗಳು ವರದಿಯಾಗಿವೆ.  

ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಬೆಂಬಲಿಸಲಾಗುತ್ತಿದೆ ಎಂದು  ಆರೋಪಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತಿತರ  ಏಜೆನ್ಸಿಗಳು ಗುರುವಾರ ಇಸ್ಲಾಮಿಕ್ ಸಂಘಟನೆಯ ನಾಯಕರ ಕಚೇರಿಗಳು ಮತ್ತು ನಿವಾಸಗಳ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಪಿಎಫ್‌ಐ ಈ ಬಂದ್ ಗೆ ಕರೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT