ಸಂಸದ ಜನಾರ್ಧನ ಮಿಶ್ರಾ 
ದೇಶ

ಮಧ್ಯಪ್ರದೇಶ: ಬರಿಗೈಯಲ್ಲಿ ಶಾಲಾ ಬಾಲಕಿಯರ ಶೌಚಾಲಯ ಕ್ಲೀನ್ ಮಾಡಿದ ಬಿಜೆಪಿ ಸಂಸದ

ಮಧ್ಯಪ್ರದೇಶದ ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ ಅವರು ರಾಜ್ಯದ ಬಾಲಕಿಯರ ಶಾಲೆಯಲ್ಲಿ ಶೌಚಾಲಯವನ್ನು ಕೇವಲ ಕೈಯಿಂದ ಸ್ವಚ್ಛಗೊಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಭೋಪಾಲ್: ಮಧ್ಯಪ್ರದೇಶದ ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ ಅವರು ರಾಜ್ಯದ ಬಾಲಕಿಯರ ಶಾಲೆಯಲ್ಲಿ ಶೌಚಾಲಯವನ್ನು ಕೇವಲ ಕೈಯಿಂದ ಸ್ವಚ್ಛಗೊಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 

ಪ್ರಸ್ತುತ ಬಿಜೆಪಿ ಯುವ ಮೋರ್ಚಾ ನಡೆಸುತ್ತಿರುವ 'ಸೇವಾ ಪಖ್ವಾಡಾ' ಅಡಿಯಲ್ಲಿ ಬಿಜೆಪಿ ಯುವ ಘಟಕವು ಖತ್ಖಾರಿ ಬಾಲಕಿಯರ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಿದೆ ಎಂದು ಬಿಜೆಪಿ ಸಂಸದರು ಮಾಡಿರುವ ಟ್ವೀಟ್ ತಿಳಿಸಿದೆ. ಶಾಲಾ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮದ ನಂತರ ಶಾಲಾ ಶೌಚಾಲಯ ಸ್ವಚ್ಛಗೊಳಿಸುವ ಕಾರ್ಯ ಮಾಡಲಾಗಿದೆ.

ವರದಿಗಳ ಪ್ರಕಾರ ಬಿಜೆಪಿಯ ಯುವ ಘಟಕವು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಸೆಪ್ಟೆಂಬರ್ 17 ರಿಂದ ಮಹಾತ್ಮ ಗಾಂಧಿಯವರ ಜನ್ಮದಿನವಾದ ಅಕ್ಟೋಬರ್ 2 ರವರೆಗೆ ಸ್ವಚ್ಛತಾ ಅಭಿಯಾನವನ್ನು ನಡೆಸುತ್ತಿದೆ. ಈ ಉಪಕ್ರಮದ ಭಾಗವಾಗಿ ಜನಾರ್ದನ್ ಮಿಶ್ರಾ ಅವರು ಮರ ನೆಡುವ ಅಭಿಯಾನದಲ್ಲಿ ಭಾಗವಹಿಸಲು ಶಾಲೆಗೆ ಭೇಟಿ ನೀಡಿದರು. ರೇವಾ ಕ್ಷೇತ್ರದ ಸಂಸದರು ತಮ್ಮ ಭೇಟಿಯ ವೇಳೆ ಬಾಲಕಿಯರ ಶಾಲೆಯಲ್ಲಿ ಶೌಚಾಲಯದ ಅನೈರ್ಮಲ್ಯವನ್ನು ಗಮನಿಸಿ ಅದನ್ನು ಬರಿಗೈಯಲ್ಲಿ ಸ್ವಚ್ಛಗೊಳಿಸಲು ನಿರ್ಧರಿಸಿದರು.

ನಂತರ ಮಾತನಾಡಿದ ಮಿಶ್ರಾ, ಸ್ವಚ್ಛತೆ ಮತ್ತು ಶುಚಿತ್ವವನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು. ಇದು ಮಹಾತ್ಮ ಗಾಂಧಿ ಮತ್ತು ಪ್ರಧಾನಿ ಮೋದಿಯವರು ನೀಡಿದ ಸಂದೇಶ. ಇಂತಹ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ್ದು ಇದೇ ಮೊದಲಲ್ಲ ಎಂದು ಅವರು ಹೇಳಿದರು.

ಪ್ರಧಾನಿ ಮೋದಿಯವರು 2014ರ ಅಕ್ಟೋಬರ್ 2ರಂದು ಸ್ವಚ್ಛ ಭಾರತ್ ಮಿಷನ್ ಅನ್ನು ಪ್ರಾರಂಭಿಸಿದರು. ಈ ಮಿಷನ್ ಅಡಿಯಲ್ಲಿ ಭಾರತದ ಎಲ್ಲಾ ಗ್ರಾಮಗಳು, ಪಂಚಾಯತ್ಗಳು, ಜಿಲ್ಲೆಗಳು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು 2019ರ ಅಕ್ಟೋಬರ್ 2ರೊಳಗೆ ತಮ್ಮನ್ನು ತಾವು 'ಬಯಲು-ಮಲವಿಸರ್ಜನೆ ಮುಕ್ತ' ಎಂದು ಘೋಷಿಸಿಕೊಂಡಿವೆ. ಮಹಾತ್ಮ ಗಾಂಧಿಯವರ 150ನೇ ಜನ್ಮ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಸ್ವಚ್ಛಭಾರತ ಯೋಜನೆಯ ಭಾಗವಾಗಿ, ಸರ್ಕಾರದ ಅಂಕಿಅಂಶಗಳ ಪ್ರಕಾರ ಗ್ರಾಮೀಣ ಭಾರತದಲ್ಲಿ 100 ದಶಲಕ್ಷಕ್ಕೂ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಲಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT