ವಿದೇಶಾಂಗ ಸಚಿವ ಎಸ್. ಜೈಶಂಕರ್ 
ದೇಶ

'ಪಕ್ಷಪಾತ ವರದಿ': ಅಮೆರಿಕ ಮಾಧ್ಯಮಗಳ ವಿರುದ್ಧ ವಿದೇಶಾಂಗ ಸಚಿವ ಎಸ್ ಜೈ ಶಂಕರ್ ಕಿಡಿ

ಅಮೆರಿಕ ಮಾಧ್ಯಮಗಳ ವಿರುದ್ಧ ತೀವ್ರ ಕಿಡಿಕಾರಿರುವ ವಿದೇಶಾಂಗ ಸಚಿವ ಎಸ್ ಜೈ ಶಂಕರ್, ಮಾಧ್ಯಮಗಳ ವರದಿ ಪಕ್ಷಪಾತದಿಂದ ಕೂಡಿದೆ ಎಂದು ಆರೋಪಿಸಿದ್ದಾರೆ.

ವಾಷಿಂಗ್ಟನ್: ಅಮೆರಿಕ ಮಾಧ್ಯಮಗಳ ವಿರುದ್ಧ ತೀವ್ರ ಕಿಡಿಕಾರಿರುವ ವಿದೇಶಾಂಗ ಸಚಿವ ಎಸ್ ಜೈ ಶಂಕರ್, ಮಾಧ್ಯಮಗಳ ವರದಿ ಪಕ್ಷಪಾತದಿಂದ ಕೂಡಿದೆ ಎಂದು ಆರೋಪಿಸಿದ್ದಾರೆ.

ಭಾರತೀಯ–ಅಮೆರಿಕನ್ನರನ್ನು ಉದ್ದೇಶಿಸಿ ಮಾತನಾಡಿದ ಅವರು, ಅಮೆರಿಕದ ಮಾಧ್ಯಮಗಳು ಭಾರತದ ಬಗ್ಗೆ ತಾರತಮ್ಯದಿಂದ ಕೂಡಿದ ವರದಿಗಳನ್ನು ಪ್ರಕಟಿಸುತ್ತಿವೆ ಎಂದು ಕಿಡಿಕಾರಿದ್ದಾರೆ. ಹೆಸರು ಹೇಳದೆಯೇ ‘ದಿ ವಾಷಿಂಗ್ಟನ್ ಪೋಸ್ಟ್’ ಪತ್ರಿಕೆ ಬಗ್ಗೆಯೂ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಮಾಧ್ಯಮಗಳನ್ನು ಗಮನಿಸಿದೆ. ಈ ನಗರದಿಂದ ಪ್ರಕಟವಾಗುವ ಪತ್ರಿಕೆಯೊಂದು ಸೇರಿದಂತೆ ಇಲ್ಲಿನ ಮಾಧ್ಯಮಗಳು ಏನು ಪ್ರಕಟಿಸುತ್ತಿವೆ ಎಂಬುದು ನಿಜವಾಗಿಯೂ ನಿಮಗೆ ಗೊತ್ತಿದೆಯೇ’ ಎಂದು ಪ್ರಶ್ನಿಸಿದ್ದಾರೆ.

ಜೆಫ್ ಬೆಜೋಸ್ ಮಾಲೀಕತ್ವದ ‘ದಿ ವಾಷಿಂಗ್ಟನ್ ಪೋಸ್ಟ್’ ಪತ್ರಿಕೆಯು ವಾಷಿಂಗ್ಟನ್ ಡಿಸಿಯಿಂದ ಪ್ರಕಟವಾಗುತ್ತಿದೆ. ‘ಮಾಧ್ಯಮಗಳ ವರದಿಗಳು ಪಕ್ಷಪಾತದಿಂದ ಕೂಡಿವೆ ಎಂಬುದು ನನ್ನ ಅಭಿಪ್ರಾಯವಾಗಿದೆ. ಭಾರತದಲ್ಲಿ ನಿಜವಾಗಿಯೂ ಪ್ರಯತ್ನಗಳಾಗುತ್ತಿವೆ... ನೋಡಿ, ಭಾರತವು ತನ್ನ ದಾರಿಯಲ್ಲೇ ಸಾಗುತ್ತಿದೆ. ತಾವೇ ಭಾರತದ ರಕ್ಷಕರು ಮತ್ತು ಭಾರತವನ್ನು ರೂಪಿಸುವವರು ಎಂದು ಭಾವಿಸಿರುವವರು ಅಲ್ಲಿ ನೆಲೆ ಕಳೆದುಕೊಳ್ಳುತ್ತಿದ್ದಾರೆ. ಹೀಗೆ ಚರ್ಚೆ ಮಾಡುವ ಕೆಲವರ ಬಣ್ಣ ಬಯಲಾಗುತ್ತಿದೆ’ ಎಂದು ಅವರು ಹೇಳಿದ್ದಾರೆ. ಭಾರತ ವಿರೋಧಿ ಶಕ್ತಿಗಳು ಇಲ್ಲಿ ಹೆಚ್ಚಾಗುತ್ತಿವೆಯಲ್ಲಾ ಎಂದು ಕೇಳಲಾದ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದ್ದಾರೆ.

ಅಂಥ ಶಕ್ತಿಗಳು ಹೊರಗಡೆಯಿಂದ ಭಾರತವನ್ನು ಗೆಲ್ಲಲು ಮತ್ತು ಹೊರಗಿದ್ದುಕೊಂಡೇ ಭಾರತಕ್ಕೆ ಒಂದು ರೂಪ ನೀಡಬೇಕು ಎಂದು ಪ್ರಯತ್ನಿಸುತ್ತಿವೆ. ಆದರೆ ಅವುಗಳು ಭಾರತದಲ್ಲಿ ಗೆಲ್ಲುವುದಿಲ್ಲ. ಇದು ನಾವು ತಿಳಿದುಕೊಳ್ಳಬೇಕಾದ ಮುಖ್ಯ ವಿಷಯ. ಸ್ಪರ್ಧಿಸುವುದು ಮುಖ್ಯ. ಯಾಕೆಂದರೆ ಹೆಚ್ಚಿನ ಅಮೆರಿಕನ್ನರು ಸೂಕ್ಷ್ಮಗಳನ್ನು ಮತ್ತು ಸ್ವದೇಶಕ್ಕೆ ಮರಳುವ ಸಂಕೀರ್ಣತೆಗಳನ್ನು ಅರಿತಿರುವುದಿಲ್ಲ. ಇತರರು ನಮ್ಮನ್ನು ವ್ಯಾಖ್ಯಾನಿಸಲು ಬಿಡಬಾರದು. ಹೀಗಾಗಿ ಇದು ಒಂದು ಸಮುದಾಯವಾಗಿ ನನಗೆ ಬಹು ಮುಖ್ಯವಾದ ವಿಷಯವಾಗಿದೆ’ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT