ನಟಿ ಜಾಕ್ವೆಲಿನ್ ಫರ್ನಾಂಡಿಸ್ 
ದೇಶ

200 ಕೋಟಿ ರೂ. ವಂಚನೆ ಪ್ರಕರಣ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಮಧ್ಯಂತರ ಜಾಮೀನು ಮಂಜೂರು

200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಪಾಟಿಯಾಲ ಹೌಸ್ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ನವದೆಹಲಿ: 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಪಾಟಿಯಾಲ ಹೌಸ್ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ವಂಚಕ ಸುಕೇಶ್ ಚಂದ್ರಶೇಖರ್ ಮತ್ತಿತರರೊಂದಿಗೆ 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಮನ್ಸ್ ನೀಡಿದ್ದ ನಟಿ ಜಾಕ್ವೆಲಿನ್  ಸೋಮವಾರ ನ್ಯಾಯಾಲಯಕ್ಕೆ ಆಗಮಿಸಿದರು. ನಟಿ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದರು.

ಹೆಚ್ಚುವರಿ  ಸೆಷನ್ಸ್ ನ್ಯಾಯಾಧೀಶ ಶೈಲೇಂದರ್ ಮಲ್ಲಿಕ್ ಜಾಮೀನು ಅರ್ಜಿ ಕುರಿತು ಇಡಿಯಿಂದ ಪ್ರತಿಕ್ರಿಯೆ ಬಯಸಿದರು. ಜಾಕ್ವೆಲಿನ್ ಪರ ವಕೀಲರ ಮನವಿ ಮೇರೆಗೆ ರೂ. 50,000 ಬಾಂಡ್ ನೊಂದಿಗೆ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿ, ಮುಂದಿನ  ವಿಚಾರಣೆಯನ್ನು ಅಕ್ಟೋಬರ್ 22ಕ್ಕೆ ಮುಂದೂಡಿತು.  

ಬುಧವಾರ ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಇಂದು  ಭೌತಿಕವಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಜಾಕ್ವೆಲಿನ್ ಫರ್ನಾಂಡಿಸ್ ಗೆ ಸಮನ್ಸ್ ಹೊರಡಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT