ನಿತೀಶ್ ಕುಮಾರ್ 
ದೇಶ

ಎಲ್ಲಾ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ಸಿಗಬೇಕು: ನಿತೀಶ್ ಕುಮಾರ್

ಎಲ್ಲಾ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ನೀಡಬೇಕು. ಇದು ಆ ರಾಜ್ಯಗಳಲ್ಲಿ ಪ್ರಗತಿಯನ್ನು ಹೆಚ್ಚಿಸುತ್ತದೆ ಮತ್ತು ದೇಶವು ಅಭೂತಪೂರ್ವ ವೇಗದಲ್ಲಿ ಮುಂದುವರೆಯಲು ಸಾಧ್ಯವಾಗುತ್ತದೆ  ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.

ಪಾಟ್ನಾ: ಎಲ್ಲಾ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ನೀಡಬೇಕು. ಇದು ಆ ರಾಜ್ಯಗಳಲ್ಲಿ ಪ್ರಗತಿಯನ್ನು ಹೆಚ್ಚಿಸುತ್ತದೆ ಮತ್ತು ದೇಶವು ಅಭೂತಪೂರ್ವ ವೇಗದಲ್ಲಿ ಮುಂದುವರೆಯಲು ಸಾಧ್ಯವಾಗುತ್ತದೆ  ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.

ಕೇಂದ್ರದ ಜನರಿಗೆ ಅಧಿಕಾರ ಅನುಭವಿಸುವ ಆಸಕ್ತಿ ಮಾತ್ರ ಇದೆ. ಅವರು ನಿಜವಾಗಿಯೂ ಕೆಲಸ ಮಾಡುತ್ತಿದ್ದಾರೆಯೇ ಎಂದು ನಿತೀಶ್ ಕುಮಾರ್ ಪ್ರಶ್ನಿಸಿದರು.
 
ಒಂದು ತಿಂಗಳ ಹಿಂದೆ ಜೆಡಿಯು ಬಿಹಾರದಲ್ಲಿ ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿದುಕೊಂಡಿತ್ತು. ನಿತೀಶ್ ಕುಮಾರ್ ರಾಜ್ಯದಲ್ಲಿ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿದ್ದವರು. ದೆಹಲಿಯಲ್ಲಿ ಆಡಳಿತ ನಡೆಸುತ್ತಿರುವವರು ಅಧಿಕಾರವನ್ನು ಅನುಭವಿಸಲು ಮಾತ್ರ ಆಸಕ್ತಿ ಹೊಂದಿದ್ದಾರೆ ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ ನಿಜವಾಗಿಯೂ ಏನಾದರೂ ಕೆಲಸ ನಡೆಯುತ್ತಿದೆಯೇ? ರಾಜ್ಯಗಳು ತಮ್ಮ ಹಕ್ಕು ಪಡೆಯುತ್ತಿವೆಯೇ? ನಾನು ಈ ಹಿಂದೆಯೇ ಹೇಳಿದ್ದೇನೆ. ಬಿಹಾರ ಮಾತ್ರವಲ್ಲದೆ ಎಲ್ಲಾ ಹಿಂದುಳಿದ ರಾಜ್ಯಗಳಿಗೆ ವಿಶೇಷ ವರ್ಗದ ಸ್ಥಾನಮಾನವನ್ನು ನೀಡಬೇಕು ಎಂದು ಮತ್ತೊಮ್ಮೆ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT