ಸಚಿನ್ ಪೈಲಟ್ 
ದೇಶ

ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ನಡುವೆ ದೆಹಲಿಗೆ ಸಚಿನ್ ಪೈಲಟ್ ಆಗಮನ

ರಾಜಸ್ಥಾನ ಕಾಂಗ್ರೆಸ್ ನಲ್ಲಿ ತೀವ್ರ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿರುವಂತೆಯೇ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಮಂಗಳವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿದರು. ಆದಾಗ್ಯೂ, ಇಲ್ಲಿಯವರೆಗೂ ಯಾವುದೇ ಸಭೆ ನಿಗದಿಯಾಗಿಲ್ಲ ಎಂದು ಅವರ ಆಪ್ತ ಮೂಲಗಳು ಹೇಳಿವೆ.

ನವದೆಹಲಿ: ರಾಜಸ್ಥಾನ ಕಾಂಗ್ರೆಸ್ ನಲ್ಲಿ ತೀವ್ರ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿರುವಂತೆಯೇ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಮಂಗಳವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿದರು. ಆದಾಗ್ಯೂ, ಇಲ್ಲಿಯವರೆಗೂ ಯಾವುದೇ ಸಭೆ ನಿಗದಿಯಾಗಿಲ್ಲ ಎಂದು ಅವರ ಆಪ್ತ ಮೂಲಗಳು ಹೇಳಿವೆ.

ರಾಜಸ್ಥಾನದಲ್ಲಿ ಪಕ್ಷದಲ್ಲಿನ ಬೆಳವಣಿಗೆ ಬಗ್ಗೆ ಕಾಂಗ್ರೆಸ್ ನ ಉನ್ನತ ನಾಯಕರು ನಿರಂತರವಾಗಿ ಗಮನಿಸುತ್ತಿರುವಂತೆಯೇ, ಪೈಲಟ್ ನವದೆಹಲಿಗೆ ಆಗಮಿಸಿರುವುದು ತೀವ್ರ ಕುತೂಹಲ ಮೂಡಿಸಿದೆ.

ವೀಕ್ಷಕರಾದ  ಮಲ್ಲಿಕಾರ್ಜುನ ಖರ್ಗೆ ಮತ್ತು ಅಜಯ್ ಮಾಕೆನ್ ಅವರಿಂದ ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ಕುರಿತ ಲಿಖಿತ ವರದಿಗಾಗಿ ಸೋನಿಯಾ ಗಾಂಧಿ ಕಾಯುತ್ತಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಲು ಈ ಇಬ್ಬರು ಮುಖಂಡರನ್ನು ವೀಕ್ಷಕರಾಗಿ ಜೈಪುರಕ್ಕೆ ಕಳುಹಿಸಲಾಗಿತ್ತು. ಆದರೆ, ಗೆಹ್ಲೋಟ್ ಬಣದ 82 ಶಾಸಕರು ಸಭೆಗೆ ಗೈರಾಗಿದ್ದರು. ನಂತರ ವೀಕ್ಷಕರು  ಶಾಸಕರ ಮನವೊಲಿಕೆ ವಿಫಲವಾಗಿ ದೆಹಲಿಗೆ ವಾಪಸ್ಸಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT