ಉದ್ಧವ್ ಠಾಕ್ರೆ ತಂಡ 
ದೇಶ

‘ನಿಜವಾದ ಶಿವಸೇನೆ’ ಹೋರಾಟದಲ್ಲಿ ಉದ್ಧವ್ ಠಾಕ್ರೆ ತಂಡಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ

ಏಕನಾಥ್ ಶಿಂಧೆ ವಿರುದ್ಧದ ಹೋರಾಟದಲ್ಲಿ ಉದ್ಧವ್ ಠಾಕ್ರೆ ಅವರಿಗೆ ಭಾರೀ ಹಿನ್ನಡೆಯಾಗಿದೆ. ನಿಜವಾದ ಶಿವಸೇನೆ ಮತ್ತು ಅದರ ಚಿನ್ಹೆಯ ಮೇಲೆ ಏಕನಾಥ್ ಶಿಂಧೆ ನೇತೃತ್ವದ ಗುಂಪಿನ ಹಕ್ಕನ್ನು ಚುನಾವಣಾ ಆಯೋಗ ನಿರ್ಧರಿಸದಂತೆ ತಡೆಯಲು ಸುಪ್ರೀಂಕೋರ್ಟ್ ನಿರಾಕರಿಸಿದೆ. 

ನವದೆಹಲಿ: ಏಕನಾಥ್ ಶಿಂಧೆ ವಿರುದ್ಧದ ಹೋರಾಟದಲ್ಲಿ ಉದ್ಧವ್ ಠಾಕ್ರೆ ಅವರಿಗೆ ಭಾರೀ ಹಿನ್ನಡೆಯಾಗಿದೆ. ನಿಜವಾದ ಶಿವಸೇನೆ ಮತ್ತು ಅದರ ಚಿನ್ಹೆಯ ಮೇಲೆ ಏಕನಾಥ್ ಶಿಂಧೆ ನೇತೃತ್ವದ ಗುಂಪಿನ ಹಕ್ಕನ್ನು ಚುನಾವಣಾ ಆಯೋಗ ನಿರ್ಧರಿಸದಂತೆ ತಡೆಯಲು ಸುಪ್ರೀಂಕೋರ್ಟ್ ನಿರಾಕರಿಸಿದೆ. 

ಈ  ಸಂಬಂಧ ಇಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್, ಎಂ ಆರ್ ಶಾ, ಕೃಷ್ಣ ಮುರಾರಿ, ಹಿಮಾ ಕೊಹ್ಲಿ ಮತ್ತು ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪಂಚ ನ್ಯಾಯಾಧೀಶರ ಪೀಠ ಶಿಂಧೆ ಗುಂಪಿನ ಮನವಿಯನ್ನು ಮುಂದುವರಿಸಲು ಚುನಾವಣಾ ಆಯೋಗಕ್ಕೆ ಅನುಮತಿ ನೀಡಿದೆ.

ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಅವರ ಸರ್ಕಾರವು ಜೂನ್‌ನಲ್ಲಿ ಏಕನಾಥ್ ಶಿಂಧೆ ನೇತೃತ್ವದ ದಂಗೆಯ ನಂತರ ಪತನಗೊಂಡಿತು. ಅವರು ಬಿಜೆಪಿಯೊಂದಿಗೆ ಹೊಸ ಸರ್ಕಾರವನ್ನು ರಚಿಸಿದರು. ಜೂನ್ 30 ರಂದು ಶಿಂಧೆ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರ ಉಪನಾಯಕರಾಗಿ ಪ್ರಮಾಣವಚನ ಸ್ವೀಕರಿಸಿದರು.

ಪಕ್ಷಾಂತರ, ವಿಲೀನ ಮತ್ತು ಅನರ್ಹತೆಗೆ ಸಂಬಂಧಿಸಿದ ಹಲವಾರು ಸಾಂವಿಧಾನಿಕ ಪ್ರಶ್ನೆಗಳನ್ನು ಎತ್ತುವ ಉದ್ಧವ್ ಠಾಕ್ರೆ ಮತ್ತು ಶಿಂಧೆ ನೇತೃತ್ವದ ಬಣಗಳು ಸಲ್ಲಿಸಿದ ಅರ್ಜಿಗಳನ್ನು ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠಕ್ಕೆ ಸುಪ್ರೀಂಕೋರ್ಟ್ ಆಗಸ್ಟ್ 23 ರಂದು ವರ್ಗಾಯಿಸಿತ್ತು.

ಪಕ್ಷಾಂತರಗೊಂಡ ಶಾಸಕರ ಅನರ್ಹತೆ, ಸ್ಪೀಕರ್ ಮತ್ತು ರಾಜ್ಯಪಾಲರ ಅಧಿಕಾರ ಮತ್ತು ನ್ಯಾಯಾಂಗ ಪರಾಮರ್ಶೆ ಕುರಿತ ಅರ್ಜಿಗಳ ಪ್ರಮುಖ ಸಾಂವಿಧಾನಿಕ ವಿಷಯಗಳನ್ನು ಪೀಠ ವಿಚಾರಣೆ ನಡೆಸಲಿದೆ ಎಂದು ನ್ಯಾಯಾಲಯ ಹೇಳಿತ್ತು.

ಏಕನಾಥ್ ಶಿಂಧೆ ಅವರಿಗೆ ನಿಷ್ಠರಾಗಿರುವ ಶಾಸಕರು ಮತ್ತೊಂದು ರಾಜಕೀಯ ಪಕ್ಷದೊಂದಿಗೆ ವಿಲೀನಗೊಂಡರೆ ಮಾತ್ರ ಸಂವಿಧಾನದ 10 ನೇ ಶೆಡ್ಯೂಲ್ ಅಡಿಯಲ್ಲಿ ಅನರ್ಹತೆಯನ್ನು ತಪ್ಪಿಸಬಹುದು ಎಂದು ಠಾಕ್ರೆ ಬಣ ನ್ಯಾಯಾಲಯಕ್ಕೆ ತಿಳಿಸಿತ್ತು. ಸ್ವಂತ ಪಕ್ಷದ ವಿಶ್ವಾಸ ಕಳೆದುಕೊಂಡಿರುವ ನಾಯಕನಿಗೆ ಪಕ್ಷಾಂತರ ನಿಷೇಧ ಕಾನೂನು ಅಸ್ತ್ರವಾಗಲಾರದು ಎಂದು ಶಿಂಧೆ ಟೀಂ ವಾದಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT