ಪ್ರಾತಿನಿಧಿಕ ಚಿತ್ರ 
ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 3,615 ಹೊಸ ಪ್ರಕರಣ, 22 ಮಂದಿ ಸಾವು

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,615 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,45,79,088ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,615 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,45,79,088ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 40,979ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾಗಿರುವ ಅಂಕಿಅಂಶಗಳ ಪ್ರಕಾರ, ಕೇರಳದಲ್ಲಿ 8 ಮಂದಿ ಸೇರಿ ದೇಶದಾದ್ಯಂತ 22 ಜನರು ಸಾವಿಗೀಡಾಗಿದ್ದಾರೆ. ಈವರೆಗೆ 5,28,584 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ದೇಶದಲ್ಲಿ ಶೇ 0.09 ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.72ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 217.96 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ. ಈ ಪೈಕಿ 94.80 ಕೋಟಿ ಡೋಸ್‌ಗಳನ್ನು ಎರಡನೇ ಡೋಸ್‌ ಆಗಿ ನೀಡಲಾಗಿದೆ. 20.69 ಕೋಟಿ ಮುನ್ನೆಚ್ಚರಿಕಾ ಡೋಸ್‌ಗಳನ್ನು ನೀಡಲಾಗಿದೆ.

ಮಂಗಳವಾರಕ್ಕೆ ಕೊನೆಗೊಂಡಂತೆ 3,23,293 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಈವರೆಗೆ 89.44 ಕೋಟಿಗೂ ಅಧಿಕ ಮಂದಿಗೆ ಪರೀಕ್ಷೆ ನಡೆಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!