ಸಾಂದರ್ಭಿಕ ಚಿತ್ರ 
ದೇಶ

ದೆಹಲಿ ಅಬಕಾರಿ ನೀತಿ ಹಗರಣ: ಮದ್ಯ ಉದ್ಯಮಿ ಸಮೀರ್ ಮಹೇಂದ್ರು ಬಂಧನ

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಇಂಡೋಸ್ಪಿರಿಟ್ಸ್‌ ಮಾಲೀಕ ಸಮೀರ್ ಮಹೇಂದ್ರು ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಇಂಡೋಸ್ಪಿರಿಟ್ಸ್‌ ಮಾಲೀಕ ಸಮೀರ್ ಮಹೇಂದ್ರು ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.

ಸಮೀರ್ ಮಹೇಂದ್ರು ಅವರನ್ನು ಇಂದು ಬೆಳಿಗ್ಗೆ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ಟ್ವೀಟ್ ಮಾಡಿದೆ. ಅಬಕಾರಿ ನೀತಿಗೆ ಸಂಬಂಧಿಸಿದಂತೆ ಈಗಾಗಲೇ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಹಲವರ ವಿರುದ್ಧ ಈಗಾಗಲೇ ಸಿಬಿಐ ಪ್ರಕರಣ ದಾಖಲಿಸಿದೆ.

ಎಎಪಿಯ ಸಂವಹನ ಮುಖ್ಯಸ್ಥ ಹಾಗೂ  ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಆಪ್ತ ಸಹಾಯಕ ವಿಜಯ್ ನಾಯರ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದ ಒಂದು ದಿನದ ನಂತರ ಮದ್ಯವನ್ನು ವಿತರಿಸುವ ಇಂಡೋಸ್ಪಿರಿಟ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಮಹೇಂದ್ರು ಅವರ ಬಂಧನವಾಗಿದೆ.

ದೆಹಲಿಯ ಅಬಕಾರಿ ನೀತಿಯ ಕುರಿತು ಸಿಬಿಐ ತನಿಖೆ ನಡೆಸುವಂತೆ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ. ಸಕ್ಸೇನಾ ಅವರು ಶಿಫಾರಸು ಮಾಡಿದ್ದರು. ಪಂಜಾಬ್‌ ವಿಧಾನಸಭೆಗೆ ಈ ವರ್ಷ ನಡೆದ ಚುನಾವಣೆಯ ಖರ್ಚಿಗೆ ಹೊಸ ಅಬಕಾರಿ ನೀತಿಯಿಂದ ದೊರೆತ ಹಣವನ್ನು ಎಎಪಿ ಬಳಸಿದೆ ಎಂದು ಆ ಪಕ್ಷದ ವಿರೋಧಿಗಳು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ