ದೇಶ

ನೋಟು ಅಮಾನ್ಯಗೊಳಿಸಿದ ಕೇಂದ್ರದ ನಿರ್ಧಾರ ಪ್ರಶ್ನಿಸಿರುವ ಅರ್ಜಿಗಳ ವಿಚಾರಣೆ ಅಕ್ಟೋಬರ್ 12ಕ್ಕೆ

Ramyashree GN

ನವದೆಹಲಿ: 500 ಮತ್ತು 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸಿದ್ದ ಕೇಂದ್ರದ 2016ರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಅಕ್ಟೋಬರ್ 12 ರಂದು ನಡೆಸುವುದಾಗಿ ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.

ನ್ಯಾಯಮೂರ್ತಿ ಎಸ್.ಎ. ನಜೀರ್ ನೇತೃತ್ವದ ಸಾಂವಿಧಾನಿಕ ಪೀಠ, ಅರ್ಜಿಗಳು ಶೈಕ್ಷಣಿಕ ವಿಚಾರಕ್ಕೆ ಸಂಬಂಧಿಸಿದ್ದವುಗಳಾದರೆ ಅವುಗಳನ್ನು ಪರಿಗಣಿಸುವುದಾಗಿ ಹೇಳಿದೆ.

ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ಎ.ಎಸ್. ಬೋಪಣ್ಣ, ವಿ.ರಾಮಸುಬ್ರಮಣಿಯನ್ ಮತ್ತು ಬಿ.ವಿ. ನಾಗರತ್ನ ಅವರನ್ನೊಳಗೊಂಡ ಪೀಠವು 2016ರ ನವೆಂಬರ್ 8 ರಂದು ಕೇಂದ್ರದ ನೋಟು ಅಮಾನ್ಯೀಕರಣದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ 58 ಅರ್ಜಿಗಳ ವಿಚಾರಣೆ ನಡೆಸಲಿದೆ.

SCROLL FOR NEXT