ಪ್ರಾತಿನಿಧಿಕ ಚಿತ್ರ 
ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 27 ಜನರು ಸಾವು, 4,272 ಹೊಸ ಪ್ರಕರಣ

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 4,272 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,45,83,360 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 4,272 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,45,83,360 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕೇರಳದಲ್ಲಿ 16 ಸೇರಿದಂತೆ 27 ಮಂದಿ ಸಾವಿಗೀಡಾಗಿದ್ದು, ಈವರೆಗೆ 5,28,611 ಮಂದಿ ಕೋವಿಡ್‌ನಿಂದ ಪ್ರಾಣಕಳೆದುಕೊಂಡಿದ್ದಾರೆ. ಇದೇ ಅವಧಿಯಲ್ಲಿ 4,474 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.09 ರಷ್ಟು ಸಕ್ರಿಯ ಪ್ರಕರಣಗಳಿದ್ದು, ಸದ್ಯ ದೇಶದಲ್ಲಿ 40,750 ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.72 ರಷ್ಟಿದ್ದು, ಇದುವರೆಗೆ 4,40,13,999 ಮಂದಿ ಗುಣಮುಖರಾಗಿದ್ದಾರೆ.

ದೈನಂದಿನ ಪಾಸಿಟಿವಿಟಿ ದರ ಶೇ 1.35ರಷ್ಟಿದ್ದು, ಮರಣ ಪ್ರಮಾಣ ಶೇ 1.19ರಷ್ಟಿದೆ. ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ ಈವರೆಗೆ 218.17 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!