ಸಂಗ್ರಹ ಚಿತ್ರ 
ದೇಶ

ಗುಜರಾತ್: ಚುಡಾಯಿಸಿದ್ದಕ್ಕೆ 2 ಸಮುದಾಯಗಳ ನಡುವೆ ಘರ್ಷಣೆ; ಪೊಲೀಸ್ ಅಧಿಕಾರಿ, ಇಬ್ಬರು ಸಿಬ್ಬಂದಿಗೆ ಗಾಯ!

ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುರೇಂದ್ರನಗರ(ಗುಜರಾತ್): ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ರಾತ್ರಿ ಧ್ರಂಗಾಧ್ರ ಪಟ್ಟಣದಲ್ಲಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರಿಗೆ ಸುಮಾರು ಎರಡು ಗಂಟೆಗಳ ಕಾಲ ಹರಸಾಹಸ ಪಟ್ಟರು.

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಕೆ ಡಿ ಜಡೇಜಾ ಅವರ ಪ್ರಕಾರ, ರಾತ್ರಿ 9.30ರ ಸುಮಾರಿಗೆ ಎರಡು ಸಮುದಾಯಗಳ ನಡುವೆ ಘರ್ಷಣೆ ಪ್ರಾರಂಭವಾಯಿತು. 200 ಜನರ ಗುಂಪು ಕಲ್ಲುಗಳು ಮತ್ತು ಇತರ ಆಯುಧಗಳಿಂದ ಶಸ್ತ್ರಸಜ್ಜಿತವಾದ ಇತರ ಗುಂಪಿನ ಮೇಲೆ ದಾಳಿ ಮಾಡಿದೆ. ಗುಂಪು ಪ್ರತಿದಾಳಿ ನಡೆಸುತ್ತಿದ್ದಂತೆ, ಎರಡು ಸಮುದಾಯಗಳ ನಡುವೆ ಕಲ್ಲು ತೂರಾಟಕ್ಕೆ ಕಾರಣವಾಯಿತು. ಧ್ರಂಗಾಧ್ರ ಪೊಲೀಸ್ ಇನ್ಸ್ ಪೆಕ್ಟರ್ ಆರ್.ಸಿ. ಚೌಧರಿ ನೇತೃತ್ವದ ತಂಡ ಪರಿಸ್ಥಿತಿ ನಿಯಂತ್ರಿಸಲು ಯತ್ನಿಸಿತು. ಘಟನೆಯಲ್ಲಿ ಅವರು ಮತ್ತು ಇಬ್ಬರು ಜವಾನರಿಗೆ ಗಾಯಗಳಾಗಿವೆ.

ಹಿತೇಶ್ ಚೌಹಾಣ್, ಮಹೇಂದ್ರ ಪರ್ಮಾರ್, ಹರ್ಷದ್ ಸಿಂಧಾ ಮತ್ತು ಇತರರು ಒಂದು ಗುಂಪಿನ ನೇತೃತ್ವ ವಹಿಸಿದ್ದರೆ, ಇನ್ನೊಂದು ಗುಂಪಿನ ನೇತೃತ್ವವನ್ನು ಅಜ್ಜು ಮಾನೆಕ್, ರಾಜಾ ಬಾಬು ಮಾಣೆಕ್ ಮತ್ತು ಇತರರು ಎಂದು ಅಧಿಕಾರಿ ತಿಳಿಸಿದ್ದಾರೆ.

ಬಾಲಕಿಗೆ ಚುಡಾಹಿಸಿದ್ದಕ್ಕೆ ಸಮುದಾಯ ಘರ್ಷಣೆ ನಡೆದಿದೆ ಎಂಬುದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಹೆಚ್ಚುವರಿ ಸಿಬ್ಬಂದಿಯೊಂದಿಗೆ ಹಿರಿಯ ಪೊಲೀಸ್ ಅಧಿಕಾರಿಗಳು ಪಟ್ಟಣಕ್ಕೆ ಆಗಮಿಸಿ ಗಲಭೆ ನಿಯಂತ್ರಿಸಿದರು.

ಕಾನೂನುಬಾಹಿರ ಸಭೆ, ಗಲಭೆ, ಹಿಂಸಾಚಾರ ಸೃಷ್ಟಿಸುವ ಉದ್ದೇಶದಿಂದ ಕಾನೂನುಬಾಹಿರ ಸಭೆ, ಸ್ವಯಂಪ್ರೇರಣೆಯಿಂದ ಸಾರ್ವಜನಿಕ ನೌಕರನ ಕರ್ತವ್ಯ ನಿರ್ವಹಣೆಗೆ ಅಡ್ಡಿ, ಗುಂಪು ಘರ್ಷಣೆ ಮತ್ತು ಸಾರ್ವಜನಿಕ ಆಸ್ತಿ ಹಾನಿಗಾಗಿ ಪೊಲೀಸರು ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳನ್ನು ಬಂಧಿಸುವ ಕಾರ್ಯದಲ್ಲಿ ಪೊಲೀಸರು ನಿರತರಾಗಿದ್ದಾರೆ ಎಂದು ಪೊಲೀಸ್ ಠಾಣಾಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ