ದಿಗ್ವಿಜಯ್ ಸಿಂಗ್ 
ದೇಶ

'ಖರ್ಗೆ ನನಗಿಂತ ಹಿರಿಯರು, ಅವರ ವಿರುದ್ಧ ಸ್ಪರ್ಧಿಸುವುದನ್ನೂ ನಾನು ಯೋಚಿಸಲಾರೆ': ದಿಗ್ವಿಜಯ್ ಸಿಂಗ್

ಮಲ್ಲಿಕಾರ್ಜುನ ಖರ್ಗೆ ನನಗಿಂತ ಹಿರಿಯರಾಗಿದ್ದು, ಅವರ ವಿರುದ್ಧ ಸ್ಪರ್ಧಿಸುವುದನ್ನು ನಾನು ಕಲ್ಪನೆ ಕೂಡ ಮಾಡಲಾರೆ.. ಹೀಗಾಗಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ನವದೆಹಲಿ: ಮಲ್ಲಿಕಾರ್ಜುನ ಖರ್ಗೆ ನನಗಿಂತ ಹಿರಿಯರಾಗಿದ್ದು, ಅವರ ವಿರುದ್ಧ ಸ್ಪರ್ಧಿಸುವುದನ್ನು ನಾನು ಕಲ್ಪನೆ ಕೂಡ ಮಾಡಲಾರೆ.. ಹೀಗಾಗಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಕಣ ರಂಗೇರಿದ್ದು, ಮಹತ್ವದ ಬೆಳವಣಿಗೆಯಲ್ಲಿ ನಿನ್ನೆಯಷ್ಟೇ ನಾಮಪತ್ರ ಸಂಗ್ರಹಿಸಿದ್ದ ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ದಿಗ್ವಿಜಯ ಸಿಂಗ್ ಅವರು ಇಂದು ಬೆಳಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ನಂತರ ಸ್ಪರ್ಧೆಯಿಂದ ಹೊರಗುಳಿದಿದ್ದಾರೆ. ನಿನ್ನೆ ತಡರಾತ್ರಿ ನಡೆದ ಸಭೆಯ ನಂತರ, ಕಾಂಗ್ರೆಸ್ ಹಿರಿಯ ನಾಯಕ ಕೆಸಿ ವೇಣುಗೋಪಾಲ್ ಅವರು ಖರ್ಗೆ ಅವರನ್ನು ಸ್ಪರ್ಧಿಸಲು ನಾಯಕತ್ವ ಬಯಸುತ್ತದೆ ಎಂದು ತಿಳಿಸಿದ ಹಿನ್ನಲೆಯಲ್ಲಿ ದಿಗ್ವಿಜಯ್ ಸಿಂಗ್ ಸ್ಪರ್ಧೆಯಿಂದ ಹಿಂದೆ ಸರಿದ್ದಾರೆ ಎನ್ನಲಾಗಿದೆ.

ಈ ಕುರಿತು ಎದ್ದಿರುವ ಪ್ರಶ್ನೆಗಳಿಗೆ ಸ್ವತಃ ದಿಗ್ವಿಜಯ್ ಸಿಂಗ್ ಅವರು ಸುದ್ದಿಗಾರರಿಗೆ ಉತ್ತರಿಸಿದ್ದು, 'ಖರ್ಗೆ ಅವರಂತಹ ಹಿರಿಯ ನಾಯಕರ ವಿರುದ್ಧ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಯೋಚಿಸಲು ಕೂಡ ನನಗೆ ಸಾಧ್ಯವಿಲ್ಲ ಎಂದು ಹೇಳಿದರು.

'ಮಲ್ಲಿಕಾರ್ಜುನ ಖರ್ಗೆ ನನ್ನ ನಾಯಕರು ಮತ್ತು ನನ್ನ ಹಿರಿಯರು, ನಿನ್ನೆ ಅವರ ನಿವಾಸಕ್ಕೆ ಹೋಗಿ ಅವರು ಸ್ಪರ್ಧಿಸುತ್ತೀರಾ ಎಂದು ಕೇಳಿದ್ದೆ, ಅವರು ಸ್ಪರ್ಧಿಸಿದರೆ ನಾನು ಅರ್ಜಿಯನ್ನು ಭರ್ತಿ ಮಾಡುವುದಿಲ್ಲ ಎಂದು ಹೇಳಿದ್ದೆ. ಈ ಹಿಂದೆ ಖರ್ಗೆ ಅವರು ಸ್ಪರ್ಧಿಸುವ ಉದ್ದೇಶವಿಲ್ಲ ಎಂದು ನನಗೆ ಮಾಧ್ಯಮಗಳ ಮೂಲಕ ತಿಳಿದುಬಂದಿತ್ತು. ಹೀಗಾಗಿ ನಾನು ಸ್ಪರ್ಧೆಗೆ ಮುಂದಾದೆ. ಈಗ ಅವರು ಸ್ಪರ್ಧೆಗೆ ನಾನೇ ಒತ್ತಾಯಿಸುತ್ತಿದ್ದೇನೆ. ನಾನು ಇಂದು ಬೆಳಿಗ್ಗೆ ಅವರನ್ನು ಭೇಟಿಯಾಗಲು ಹೋಗಿದ್ದೆ, ಅವರು ನಾಮಪತ್ರ ಸಲ್ಲಿಸುವ ವೇಳೆ ನಾನು ಕೂಡ ಅವರೊಂದಿಗೆ ಹೋಗುತ್ತೇನೆ ಎಂದು ಸಿಂಗ್ ಹೇಳಿದರು.

ಖರ್ಗೆ ಅವರು ಪಕ್ಷದ ಹಿರಿಯ ಮತ್ತು ಗೌರವಾನ್ವಿತ ನಾಯಕ ಮತ್ತು ಅವರ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಾನು ಯೋಚಿಸುವುದಿಲ್ಲ. ಖರ್ಗೆ ಅವರು ನನಗೆ ಮೊದಲೇ ಹೇಳಿದ್ದರೆ, ನಾನು ನಾಮಪತ್ರವನ್ನು ಸಂಗ್ರಹಿಸಲು ಹೋಗುತ್ತಿರಲಿಲ್ಲ. ಈಗ ಅವರು ತಮ್ಮ ನಾಮಪತ್ರವನ್ನು ಸಲ್ಲಿಸಲು ಉದ್ದೇಶಿಸಿದ್ದಾರೆ, ನಾನು ಅವರ ಪ್ರಸ್ತಾಪಕನಾಗುತ್ತೇನೆ ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಇದೇ ವೇಳೆ ನೆಹರು-ಗಾಂಧಿ ಕುಟುಂಬಕ್ಕೆ ತಮ್ಮ ಬದ್ಧತೆಯಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ ಸಿಂಗ್ ಅವರು, "ನಾನು ನನ್ನ ಜೀವನದುದ್ದಕ್ಕೂ ಕಾಂಗ್ರೆಸ್‌ಗಾಗಿ ಕೆಲಸ ಮಾಡಿದ್ದೇನೆ ಮತ್ತು ಅದನ್ನು ಮುಂದುವರಿಸುತ್ತೇನೆ. ನಾನು ಮೂರು ವಿಷಯಗಳಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಮೊದಲನೆಯದು, ದಲಿತ, ಬುಡಕಟ್ಟು ಮತ್ತು ಬಡವರ ವಿಚಾರಕ್ಕೆ, ಎರಡನೆಯದು, ಕೋಮು ಶಾಂತಿ ಕದಡುವಲ್ಲಿ ತೊಡಗಿರುವವರೊಂದಿಗೆ ನಾನು ರಾಜಿ ಮಾಡುವುದಿಲ್ಲ. ಮೂರನೆಯದಾಗಿ ನೆಹರೂ-ಗಾಂಧಿ ಕುಟುಂಬಕ್ಕೆ ನನ್ನ ಬದ್ಧತೆಯ ಮೇಲೆ ರಾಜಿ ಮಾಡಿಕೊಳ್ಳುವುದಿಲ್ಲ," ಎಂದು ಅವರು ಹೇಳಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT