ಅತ್ಯಾಚಾರ (ಸಂಗ್ರಹ ಚಿತ್ರ) 
ದೇಶ

ಬಿಹಾರ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ 50 ಸಾವಿರಕ್ಕೆ ಮಾರಾಟ; ಮೂವರ ಬಂಧನ

ಬಿಹಾರದ ಮಧುಬನಿ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬಳಿಕ ಬಾಲಕಿಯನ್ನು ಮಾರಾಟ ಮಾಡಿದ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

ಪಾಟ್ನಾ: ಬಿಹಾರದ ಮಧುಬನಿ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬಳಿಕ ಬಾಲಕಿಯನ್ನು ಮಾರಾಟ ಮಾಡಿದ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

ಪೊಲೀಸರ ಪ್ರಕಾರ, ಮಹಿಳಾ ಪಿಂಪ್‌ಗೆ 50,000 ರೂ.ಗೆ ಬಾಲಕಿಯನ್ನು ಮಾರಾಟ ಮಾಡುವ ಮೊದಲು ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವರು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಗುರುವಾರ ರಾತ್ರಿ ಉತ್ತರ ಪ್ರದೇಶದ ಮೌ ಜಿಲ್ಲೆಯಲ್ಲಿ ತಂಡವೊಂದು ಮಹಿಳೆಯ ವಶದಲ್ಲಿದ್ದ ಬಾಲಕಿಯನ್ನು ರಕ್ಷಿಸಿ ಪ್ರಕರಣವನ್ನು ಭೇದಿಸಿದ ಘಟನೆ ಬೆಳಕಿಗೆ ಬಂದಿದೆ.

ಬಂಧಿತರನ್ನು ಸೋನಿ ದೇವಿ, ಜೈನಗರದ ಅಶೋಕ್ ಮಾರುಕಟ್ಟೆಯ ರಾತ್ರಿ ಕಾವಲುಗಾರ ಅರ್ಜುನ್ ಯಾದವ್ ಮತ್ತು ಎಲೆಕ್ಟ್ರಿಷಿಯನ್ ಸಜನ್ ಕುಮಾರ್ ಎಂದು ಗುರುತಿಸಲಾಗಿದೆ.

ಇನ್ನು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಜೈನಗರ ಪೊಲೀಸ್ ಠಾಣೆಯ ಪೊಲೀಸ್ ಚಾಲಕ ಆಚಾರ್ಯ ಮತ್ತು ಚೋಕಿದಾರ್ ರಾಮ್‌ಜೀವನ್ ಪಾಸ್ವಾನ್ ತಲೆಮರೆಸಿಕೊಂಡಿದ್ದಾರೆ.

ಸಂತ್ರಸ್ತೆ ಒಂದು ತಿಂಗಳ ಹಿಂದೆ ತನ್ನ ಸ್ವಂತ ಪಟ್ಟಣವಾದ ಮೌವಿನಿಂದ ದಾರಿ ತಪ್ಪಿ ಮಧುಬನಿ ಜಿಲ್ಲೆಯ ಜೈನಗರ ಪಟ್ಟಣಕ್ಕೆ ಬಂದಿದ್ದಳು. ಅಶೋಕ್ ಮಾರ್ಕೆಟ್‌ನಲ್ಲಿ ತಿರುಗಾಡುತ್ತಿದ್ದಾಗ ಆಕೆ ಅರ್ಜುನ್ ಯಾದವ್‌ನ ಸಹಾಯ ಯಾಚಿಸಿದ್ದಾಳೆ. ಈ ವೇಳೆ ಬಾಲಕಿಯನ್ನು ಏಕಾಂತ ಸ್ಥಳಕ್ಕೆ ಕರೆದೊಯ್ದು ತನ್ನ ಇತರ ಮೂವರು ಸ್ನೇಹಿತರನ್ನು ಕರೆದು ಸರದಿಯಲ್ಲಿ ಅವಳ ಮೇಲೆ ಅತ್ಯಾಚಾರವೆಸಗಿದರು ಮತ್ತು ಅವಳನ್ನು ಕೋಣೆಯಲ್ಲಿ ಕೂಡಿ ಹಾಕಿದ್ದರು. 

ಬಾಲಕಿ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ ಮತ್ತು ಇದಕ್ಕಾಗಿ ಇತರರನ್ನು ಕರೆದಿದ್ದಾರೆ.

ಸಂತ್ರಸ್ತೆ ಮನೆಯವರು ಬಾಲಕಿ ನಾಪತ್ತೆಯಾಗಿರುವುದಾಗಿ ಮೌ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮಾಹಿತಿಯ ಆಧಾರದ ಮೇಲೆ, ಮೌ ಪೊಲೀಸರ ತಂಡ ಮಧುಬನಿಯ ಜೈನಗರ ಪಟ್ಟಣಕ್ಕೆ ಆಗಮಿಸಿ ಸೋನಿ ದೇವಿ ಮನೆಯ ಮೇಲೆ ದಾಳಿ ನಡೆಸಿ, ಬಾಲಕಿಯನ್ನು ರಕ್ಷಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿದ್ಯಾರ್ಥಿಗಳ ಮೇಲೆ ಪೆಲ್ಲೆಟ್ ಗುಂಡಿನ ದಾಳಿ: ಶಾ ಅವರೇ ಆದೇಶ ನೀಡಿದ್ದಾರೆ, ಇಲ್ಲವೇ ಅವರು ಅಸಮರ್ಥ; ವಜಾಗೊಳಿಗೊಳಿಸಿ- ಪ್ರಧಾನಿಗೆ ರಾಹುಲ್ ಒತ್ತಾಯ

CWRC ಆದೇಶದ ವಿರುದ್ಧ ಮೇಲ್ಮನವಿ: ಕಾವೇರಿ ಜಲಾನಯನ ಪ್ರದೇಶದ ಪರಿಸ್ಥಿತಿ ಅರಿಯಲು ಸಿಎಂ ವಿಜಯ್ ಗೆ ಹೆಲಿಕಾಪ್ಟರ್ ವ್ಯವಸ್ಥೆ- ಸಿಎಂ ಡಿಕೆ ಶಿವಕುಮಾರ್!

ಕಾವೇರಿ ನೀರು ಬಿಡುಗಡೆ ಸಮಿತಿಯ ಆದೇಶವು 'ಅವೈಜ್ಞಾನಿಕ', ಕರ್ನಾಟಕಕ್ಕೆ 'ಮಾರಕ': ಕೇಂದ್ರ ಸಚಿವ ಕುಮಾರಸ್ವಾಮಿ

ಚೆನ್ನೈ ಮೆಟ್ರೋ ರೈಲಿನಲ್ಲಿ ಸಿಎಂ ವಿಜಯ್ ಪ್ರಯಾಣ: ಜನರೊಂದಿಗೆ ಸಂವಾದ, ಸರಳತೆಗೆ ಫ್ಯಾನ್ಸ್ ಫಿದಾ! Video

Beat the f**king sh*t out: ಅಮೆರಿಕದ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ, ಟ್ರಂಪ್ ಆಕ್ರೋಶ!