ದೇಶ

ಕಾಂಗ್ರೆಸ್ ಅಧ್ಯಕ್ಷ ಚುನಾವಣೆ: ಶಶಿ ತರೂರ್ ನಾಮಪತ್ರ ಸಲ್ಲಿಕೆ

Srinivasamurthy VN

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ನಿಮಿತ್ತ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶುಕ್ರವಾರ ನಾಮಪತ್ರ ಸಲ್ಲಿಸಿದರು.

ದೆಹಲಿಯ ಪಕ್ಷದ ಪ್ರಧಾನ ಕಚೇರಿಗೆ ತಮ್ಮ ಬೆಂಬಲಿಗ ನಾಯಕರೊಂದಿಗೆ ಆಗಮಿಸಿದ ತಿರುವನಂತಪುರಂ ಸಂಸದ ಶಶಿತರೂರ್ ಅವರು ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಅವರಿಗೆ ತಮ್ಮ ಪ್ರಮಾಣ ಪತ್ರವನ್ನು ಸಲ್ಲಿಸಿದರು. 

ಡೊಳ್ಳು ಬಾರಿಸುವ ಸದ್ದು, ಗದ್ದಲದ ನಡುವೆ ಎಐಸಿಸಿ ಕೇಂದ್ರ ಕಚೇರಿಗೆ ಶಶಿತರೂರ್ ಪ್ರವೇಶ ಮಾಡಿದ್ದು ವಿಶೇಷವಾಗಿತ್ತು. ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮುನ್ನ ತರೂರ್ ಬೆಳಗ್ಗೆ ರಾಜ್‌ಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದರು. 

ಇದೇ ವಿಚಾರವಾಗಿ ಟ್ವೀಟ್ ಮಾಡಿದ್ದ ತರೂರ್, "21 ನೇ ಶತಮಾನಕ್ಕೆ ಭಾರತದ ಸೇತುವೆಯನ್ನು ನಿರ್ಮಿಸಿದ ವ್ಯಕ್ತಿಗೆ ಇಂದು ಬೆಳಿಗ್ಗೆ ಗೌರವ ಸಲ್ಲಿಸಲಾಗಿದೆ ಎಂದು ತಿಳಿಸಿದ್ದರು. ಇದೇ ವೇಳೆ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಮಾತನ್ನು ಉಲ್ಲೇಖಿಸಿದ ತರೂರ್ ಅವರು, "ಭಾರತವು ಹಳೆಯ ದೇಶ.. ಆದರೆ ಯುವ ರಾಷ್ಟ್ರವಾಗಿದೆ. ನಾನು ಭಾರತವನ್ನು ಬಲಿಷ್ಠ, ಸ್ವತಂತ್ರ, ಸ್ವಾವಲಂಬಿ ಮತ್ತು ಮನುಕುಲದ ಸೇವೆಯಲ್ಲಿ ವಿಶ್ವದ ರಾಷ್ಟ್ರಗಳ ಮುಂಚೂಣಿಯಲ್ಲಿರಬೇಕೆಂದು ಕನಸು ಕಾಣುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ, 'ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಅಭ್ಯರ್ಥಿಯಾಗಿ ನಾನು ಈಗಷ್ಟೇ ನಾಮಪತ್ರ ಸಲ್ಲಿಸಿದ್ದೇನೆ. ಭಾರತದ ಏಕೈಕ ಪಕ್ಷಕ್ಕೆ ತನ್ನ ನಾಯಕನನ್ನು ಆಯ್ಕೆ ಮಾಡಲು ಮುಕ್ತ ಪ್ರಜಾಸತ್ತಾತ್ಮಕ ಪ್ರಕ್ರಿಯೆಯೊಂದಿಗೆ ಸೇವೆ ಸಲ್ಲಿಸುವುದು ಒಂದು ವಿಶೇಷವಾಗಿದೆ. ಸೋನಿಯಾ ಗಾಂಧಿ ಅವರ ಮಾರ್ಗದರ್ಶನ ಮತ್ತು ದೂರದೃಷ್ಟಿಯನ್ನು ಬಹಳವಾಗಿ ಪ್ರಶಂಸಿಸುತ್ತೇನೆ.

ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆಗೆ ಸಕಲ ಸಿದ್ಧತೆ ಮಾಡಲಾಗಿದ್ದು, ಪಕ್ಷದ ಮುಖಂಡರು ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಸಬಹುದು.  ಅಕ್ಟೋಬರ್ 17 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 19 ರಂದು ಫಲಿತಾಂಶ ಪ್ರಕಟವಾಗಲಿದೆ.

SCROLL FOR NEXT