ಶಶಿ ತರೂರ್ 
ದೇಶ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ತರೂರ್ ಪ್ರಣಾಳಿಕೆಯಲ್ಲಿ ಭಾರತದ ಭೂಪಟವೇ ಛಿದ್ರ!

ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಅವರು ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಭಾಗಗಳಿಲ್ಲದ...

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಅವರು ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಭಾಗಗಳಿಲ್ಲದ ಭಾರತದ ನಕ್ಷೆ ಭಾರೀ ಟೀಕೆಗೆ ಗುರಿಯಾಗಿದೆ.

ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ವಿಟರ್‌ನಲ್ಲಿ ಇದನ್ನು “ದೊಡ್ಡ ಅವಿವೇಕ” “ನಾಚಿಕೆಗೇಡಿನ” ಸಂಗತಿ ಎಂದು ಕರೆದಿದ್ದಾರೆ. ಕೆಲವರು ಅವರನ್ನು “ವಿಭಜಕ” ಎಂದು ಆರೋಪಿಸಿದ್ದಾರೆ. ಶಶಿ ತರೂರ್ ಅವರು ಟ್ವಿಟರ್ ನಲ್ಲಿ 8 ಮಿಲಿಯನ್‌ಗಿಂತಲೂ ಹೆಚ್ಚು ಹಿಂಬಾಲಕರನ್ನು ಹೊಂದಿದ್ದಾರೆ.

ಮೂರು ವರ್ಷಗಳಲ್ಲಿ ಎರಡನೇ ಬಾರಿಗೆ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರು ಭಾರತ ಭೂಪಟದ ವಿಚಾರದಲ್ಲಿ ವಿವಾದಕ್ಕೆ ಸಿಲುಕಿದ್ದಾರೆ.

‘ಥಿಂಕ್ ಟುಮಾರೊ, ಥಿಂಕ್ ತರೂರ್’ ಎಂಬ ಅಡಿಬರಹದೊಂದಿಗೆ ತಮ್ಮ ಪ್ರಣಾಳಿಕೆಯ ಕಿರುಪುಸ್ತಕದಲ್ಲಿ, ಅವರು ಭಾರತದಾದ್ಯಂತ ಇರುವ ಕಾಂಗ್ರೆಸ್ ಘಟಕಗಳನ್ನು ಪ್ರತಿನಿಧಿಸುವ ಚುಕ್ಕೆಗಳ ಜಾಲವನ್ನು ಹೊಂದಿರುವ ನಕ್ಷೆಯನ್ನು ಬಳಸಿದ್ದಾರೆ. ಇದು ಪಾಕಿಸ್ತಾನ ಮತ್ತು ಚೀನಾ ಆಕ್ರಮಿಸಿಕೊಂಡಿರುವ ಜಮ್ಮು, ಕಾಶ್ಮೀರ ಮತ್ತು ಲಡಾಖ್‌ನ ಭಾಗಗಳನ್ನು ಒಳಗೊಂಡಿರುವ ಭಾರತದ ಅಧಿಕೃತ ನಕ್ಷೆಗಿಂತ ಭಿನ್ನವಾಗಿದೆ.

ಕಾಂಗ್ರೆಸ್ ಚುನಾವಣೆಯಲ್ಲಿ, ಶಶಿ ತರೂರ್ ಅವರು ಪಕ್ಷದ ರಾಜ್ಯಸಭಾ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಮುಖ ಎದುರಾಳಿಯಾಗಿದ್ದಾರೆ. ಅವರು ಗಾಂಧಿಯವರ ಬೆಂಬಲದಿಂದ ಮುಂಚೂಣಿಯಲ್ಲಿದ್ದಾರೆ. ಜಾರ್ಖಂಡ್ ಮಾಜಿ ಸಚಿವ ಕೆಎನ್ ತ್ರಿಪಾಠಿ ಅವರು ಅಕ್ಟೋಬರ್ 17 ರಂದು ನಡೆಯುವ ಚುನಾವಣೆಗೆ ಮೂರನೇ ಅಭ್ಯರ್ಥಿಯಾಗಿದ್ದು, ಎರಡು ದಿನಗಳ ನಂತರ ಫಲಿತಾಂಶ ಪ್ರಕಟಿಸಲಾಗುತ್ತಿದೆ.

20 ವರ್ಷಗಳ ನಂತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಗಾಂಧಿಯೇತರ ಸದಸ್ಯರು ಚುನಾವಣಾ ಕಣದಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT