ಸಾಂದರ್ಭಿಕ ಚಿತ್ರ 
ದೇಶ

ವ್ಯಾಪಂ ಹಗರಣ: ಐವರಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ

ದೇಶದಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಮಧ್ಯ ಪ್ರದೇಶದಲ್ಲಿ ನಡೆದ ಬಹುಕೋಟಿ ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಐವರಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಭೋಪಾಲ್ ಸಿಬಿಐ ವಿಶೇಷ ಕೋರ್ಟ್ ಶುಕ್ರವಾರ ತೀರ್ಪು ನೀಡಿದೆ.

ಭೋಪಾಲ್: ದೇಶದಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಮಧ್ಯ ಪ್ರದೇಶದಲ್ಲಿ ನಡೆದ ಬಹುಕೋಟಿ ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಐವರಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಭೋಪಾಲ್ ಸಿಬಿಐ ವಿಶೇಷ ಕೋರ್ಟ್ ಶುಕ್ರವಾರ ತೀರ್ಪು ನೀಡಿದೆ.

2013ರಲ್ಲಿ ಮಧ್ಯಪ್ರದೇಶ ವೃತ್ತಿಪರ ಪರೀಕ್ಷಾ ಮಂಡಳಿ ನಡೆಸಿದ ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ ನ್ಯಾಯಾಧೀಶರಾದ ನಿತಿರಾಜ್ ಸಿಂಗ್ ಸಿಸೋಡಿಯಾ ಅವರು ಅಪರಾಧಿಗಳಾದ ಕಮಲ್ ಕಿಶೋರ್, ಅಮರ್ ಸಿಂಗ್, ನಾಗೇಂದ್ರ ಸಿಂಗ್, ಸುರೇಶ್ ಸಿಂಗ್ ಹಾಗೂ ರವಿಕುಮಾರ್ ರಜಪೂತ್ ಗೆ ಏಳು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ್ದಾರೆ.

ನ್ಯಾಯಾಲಯ ಅಪರಾಧಿಗಳಿಗೆ ಜೈಲು ಶಿಕ್ಷೆಯ ಜೊತೆಗೆ ತಲಾ 10,000 ರೂ.ಗಳ ದಂಡವನ್ನು ವಿಧಿಸಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಮನುಜಿ ಉಪಾಧ್ಯಾಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾಸಿಕ್ಯೂಷನ್ ಪ್ರಕಾರ, ಕಮಲ್, ಅಮರ್, ನಾಗೇಂದ್ರ ಮತ್ತು ಸುರೇಶ್ ಅವರು ಏಪ್ರಿಲ್ 7, 2013 ರಂದು ಮಧ್ಯ ಪ್ರದೇಶ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯನ್ನು ಬರೆಯಲು ಬೇರೆ ಜನರನ್ನು ನೇಮಿಸಿಕೊಂಡಿದ್ದರು.

ರವಿ ರಜಪೂತ್ ಅವರು ನಾಗೇಂದ್ರ ಪರವಾಗಿ ನೇಮಕಾತಿ ಪರೀಕ್ಷೆ ಬರೆದಿದ್ದಾರೆ ಎಂದು ಉಪಾಧ್ಯಾಯ ಹೇಳಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ