ರಾಹುಲ್ ಗಾಂಧಿ 
ದೇಶ

ಆರ್‌ಎಸ್‌ಎಸ್‌ ನವರು 'ಕೌರವರು' ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿಯ ಸಮಸ್ಯೆಗಳು ನಿಲ್ಲುವ ಸೂಚನೆಗಳು ಕಾಣುತ್ತಿಲ್ಲ. ಕಾಂಗ್ರೆಸ್ ನಾಯಕ ಒಂದಿಲ್ಲೊಂದು ಪ್ರಕರಣದಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ.

ಹರಿದ್ವಾರ: ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿಯ ಸಮಸ್ಯೆಗಳು ನಿಲ್ಲುವ ಸೂಚನೆಗಳು ಕಾಣುತ್ತಿಲ್ಲ. ಕಾಂಗ್ರೆಸ್ ನಾಯಕ ಒಂದಿಲ್ಲೊಂದು ಪ್ರಕರಣದಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ. 

ಸುದ್ದಿ ಸಂಸ್ಥೆಯೊಂದರ ಪ್ರಕಾರ, ಈ ಬಾರಿ ಹರಿದ್ವಾರದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಭಾರತ್ ಜೋಡೋ ಯಾತ್ರೆಯ ವೇಳೆ ಆರ್‌ಎಸ್‌ಎಸ್‌ ಸಂಘಟನೆಯು 21ನೇ ಶತಮಾನದ ಕೌರವ ಎಂದು ಹೇಳಿಕೆ ನೀಡಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಆರ್‌ಎಸ್‌ಎಸ್‌ ನ ಕಾರ್ಯಕರ್ತರೊಬ್ಬರು ಹರಿದ್ವಾರದ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ವಾಸ್ತವವಾಗಿ, ಜನವರಿಯಲ್ಲಿ ಭಾರತ್ ಜೋಡೋ ಯಾತ್ರೆ ಹರಿಯಾಣವನ್ನು ತಲುಪಿದಾಗ, ರಾಹುಲ್ ಗಾಂಧಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು(ಆರ್‌ಎಸ್‌ಎಸ್) '21ನೇ ಶತಮಾನದ ಕೌರವರು' ಎಂದು ಬಣ್ಣಿಸಿದರು. ಇಂದಿನ ಕೌರವರು ಖಾಕಿ ಹಾಫ್ ಪ್ಯಾಂಟ್ ಧರಿಸುತ್ತಾರೆ. ಕೈಯಲ್ಲಿ ಕೋಲು ಹಿಡಿದುಕೊಳ್ಳುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿದ್ದರು.

ವರದಿಯ ಪ್ರಕಾರ, ಆರ್‌ಎಸ್‌ಎಸ್ ಕಾರ್ಯಕರ್ತನ ಹೆಸರು ಕಮಲ್ ಭದೌರಿಯಾ ಎಂಬುದಾಗಿದ್ದು ಅವರು ವೃತ್ತಿಯಲ್ಲಿ ವಕೀಲರಾಗಿದ್ದಾರೆ. 'ರಾಹುಲ್ ಗಾಂಧಿ ಅವರು ಆರ್‌ಎಸ್‌ಎಸ್ ಅನ್ನು 21 ನೇ ಶತಮಾನದ ಕೌರವರಿಗೆ ಹೋಲಿಸಿದ್ದಾರೆ. ಇದು ಅವರ ದ್ವೇಷದ ಭಾಷಣವೇ ಅವರ ಮನಸ್ಥಿತಿಯನ್ನು ಬಹಿರಂಗಪಡಿಸುತ್ತದೆ ಎಂದು ಕಮಲ್ ಭದೌರಿಯಾ ಹೇಳಿದ್ದಾರೆ.

ಐಪಿಸಿ ಸೆಕ್ಷನ್ 499 ಮತ್ತು 500 ಅಡಿಯಲ್ಲಿ ದೂರು ದಾಖಲು
ಆರೆಸ್ಸೆಸ್ ಕಾರ್ಯಕರ್ತ ಕಮಲ್ ಭಡೋರಿಯಾ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಹರಿದ್ವಾರ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಏಪ್ರಿಲ್ 12ರಂದು ವಿಚಾರಣೆ ನಡೆಯಲಿದೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 499 ಮತ್ತು 500 ಅಡಿಯಲ್ಲಿ ನಾವು ದೂರು ದಾಖಲಿಸಿದ್ದೇವೆ ಎಂದು ವಕೀಲ ಅರುಣ್ ಭದೌರಿಯಾ ಹೇಳಿದ್ದಾರೆ. ಕ್ರಿಮಿನಲ್ ಮಾನನಷ್ಟಕ್ಕೆ ಸಂಬಂಧಿಸಿದ ಎರಡು ನಿಬಂಧನೆಗಳು, ಗರಿಷ್ಠ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಬಹುದು.

ಪ್ರಕರಣವೊಂದರಲ್ಲಿ ರಾಹುಲ್ ಗಾಂಧಿಗೆ ಈಗಾಗಲೇ ಎರಡು ವರ್ಷ ಶಿಕ್ಷೆ
ಮೋದಿ ಉಪನಾಮಕ್ಕೆ ಮಾನಹಾನಿ ಮಾಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸೂರತ್‌ನ ನ್ಯಾಯಾಲಯದಲ್ಲಿ ಎರಡು ವರ್ಷಗಳ ಶಿಕ್ಷೆ ವಿಧಿಸಲಾಗಿದೆ. ಇದರಲ್ಲಿ ಅವರು ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ. ಆದರೆ, ಈ ತೀರ್ಪನ್ನು ಪ್ರಶ್ನಿಸಿ ಅವರು ಇನ್ನೂ ಉನ್ನತ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿಲ್ಲ. ಅದೇ ವೇಳೆ ದೋಷಿ ಎಂದು ಸಾಬೀತಾದ ಕಾರಣ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನೂ ರದ್ದುಗೊಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT