ಕಮಲ್ ನಾಥ್ 
ದೇಶ

ಇಂದೋರ್ ದೇವಾಲಯದ ಮೆಟ್ಟಿಲು ಬಾವಿ ದುರಂತಕ್ಕೆ ಅಕ್ರಮ ನಿರ್ಮಾಣ ಕಾರಣ: ಕಮಲ್ ನಾಥ್

36 ಜನರನ್ನು ಬಲಿ ಪಡೆದ ಇಂದೋರ್ ದೇವಸ್ಥಾನದ ಮೆಟ್ಟಿಲು ಬಾವಿ ದುರಂತಕ್ಕೆ ಅಕ್ರಮ ನಿರ್ಮಾಣಗಳು ಕಾರಣ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಅವರು ಶನಿವಾರ ಆರೋಪಿಸಿದ್ದಾರೆ.

ಇಂದೋರ್: 36 ಜನರನ್ನು ಬಲಿ ಪಡೆದ ಇಂದೋರ್ ದೇವಸ್ಥಾನದ ಮೆಟ್ಟಿಲು ಬಾವಿ ದುರಂತಕ್ಕೆ ಅಕ್ರಮ ನಿರ್ಮಾಣಗಳು ಕಾರಣ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಅವರು ಶನಿವಾರ ಆರೋಪಿಸಿದ್ದಾರೆ.

ಆಡಳಿತಾರೂಢ ಭಾರತೀಯ ಜನತಾ ಪಕ್ಷದ(ಬಿಜೆಪಿ) ಒತ್ತಡಕ್ಕೆ ಮಣಿದು ಸ್ಥಳೀಯ ಮಹಾನಗರ ಪಾಲಿಕೆ ಮೆಟ್ಟಿಲುಬಾವಿಯ ಮೇಲಿನ ಅನಧಿಕೃತ ನಿರ್ಮಾಣಗಳನ್ನು ಕೆಡವಲಿಲ್ಲ ಎಂದ ಕಮಲ್ ನಾಥ್ ಅವರು, ಮುಂದಿನ ಏಳು ದಿನಗಳಲ್ಲಿ ಅಕ್ರಮ ನಿರ್ಮಾಣಗಳನ್ನು ತೆರವು ಮಾಡದಿದ್ದರೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಪಟೇಲ್ ನಗರದ ಬಾಳೇಶ್ವರ ಮಹಾದೇವ ಜುಲೇಲಾಲ್ ದೇವಸ್ಥಾನದಲ್ಲಿ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಕಮಲ್ ನಾಥ್, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಸಾರ್ವಜನಿಕ ಸ್ಥಳಗಳಲ್ಲಿ ಭದ್ರತಾ ಪರಿಶೋಧನೆ ಕಡ್ಡಾಯಗೊಳಿಸಲು ಕಾನೂನು ಜಾರಿಗೆ ತರಲಿದೆ ಎಂದು ಹೇಳಿದರು.

ಗುರುವಾರ ಮೆಟ್ಟಿಲುಬಾವಿಯ ಮೇಲೆ ನಿರ್ಮಿಸಲಾದ ದೇವಾಲಯದ ನೆಲ ಕುಸಿದು 21 ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಮೂವತ್ತಾರು ಜನ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!