ಸಂಗ್ರಹ ಚಿತ್ರ 
ದೇಶ

ಕೋವಿಡ್-19: ಭಾರತದಲ್ಲಿಂದು 2,994 ಹೊಸ ಕೇಸ್ ಪತ್ತೆ, 16 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣ ಸಂಖ್ಯೆ

ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,994 ಹೊಸ ಪ್ರಕರಣಗಳು ಪತ್ತೆಯಾಗಿವೆ.

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,994 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,18,781ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,876ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 16,354ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,41,71,551ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 1,43,364 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ  92,16,76,372 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,20,66,09,015 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT