ದೇಶ

ಏಪ್ರಿಲ್-ಜೂನ್ ಅವಧಿಯಲ್ಲಿ ಸಾಮಾನ್ಯಕ್ಕಿಂತ ಗರಿಷ್ಠ ತಾಪಮಾನ: ಸುಡಲಿದೆ ಬಿಸಿಲ ಧಗೆ

Srinivas Rao BV

ನವದೆಹಲಿ: ವಾಯುವ್ಯ ಮತ್ತು ಪರ್ಯಾಯ ದ್ವೀಪ ಪ್ರದೇಶಗಳನ್ನು ಹೊರತುಪಡಿಸಿದರೆ ಭಾರತದ ಬಹುತೇಕ ಎಲ್ಲಾ ಪ್ರದೇಶಗಳನ್ನೂ ಏಪ್ರಿಲ್-ಜೂನ್ ವರೆಗೆ ಬಿಸಿಲ ಧಗೆ ಸುಡಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
 
ಏಪ್ರಿಲ್- ಜೂನ್ ಅವಧಿಯಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ವರದಿಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಅವಧಿಯಲ್ಲಿ ಭಾರತದ ಮಧ್ಯಭಾಗ, ಪೂರ್ವ ಭಾಗಗಳಲ್ಲಿ ಹೆಚ್ಚಿನ ತಾಪಮಾನ ಹಾಗೂ ಉಷ್ಣಹವೆ ದಾಖಲಾಗಲಿದೆ. ಪ್ರಮುಖವಾಗಿ ಬಿಹಾರ, ಜಾರ್ಖಂಡ್, ಉತ್ತರ ಪ್ರದೆಶ, ಒಡಿಶಾ, ಪಶ್ಚಿಮ ಬಂಗಾಳ, ಚತ್ತೀಸ್ ಗಢ, ಮಹಾರಾಷ್ಟ್ರ, ಗುಜರಾತ್, ಪಂಜಾಬ್, ಹರ್ಯಾಣಗಳನ್ನು ಉಷ್ಣಹವೆ ಹೆಚ್ಚು ಬಾಧಿಸಲಿದೆ ಎಂದು ಐಎಂಡಿ ನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ಹೇಳಿದ್ದಾರೆ.

ಏಪ್ರಿಲ್ ನಲ್ಲಿ ಸಾಮಾನ್ಯವಾದ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ. ಈ ಅವಧಿಯಲ್ಲಿ ಪೂರ್ವ ಹಾಗೂ ಈಶಾನ್ಯ ಭಾರತಗಳಲ್ಲಿ ವಾಡಿಕೆಗಿಂತಲೂ ಕಡಿಮೆ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ. 

SCROLL FOR NEXT