ದೇಶ

ರಾಮನವಮಿಯಂದು ಕತ್ತಿ ಮತ್ತು ದೊಣ್ಣೆಗಳ ಸಾಂಪ್ರದಾಯಿಕ ಪ್ರದರ್ಶನ ವೇಳೆ 700ಕ್ಕೂ ಹೆಚ್ಚು ಮಂದಿಗೆ ಗಾಯ!

ಜಾರ್ಖಂಡ್ ರಾಜ್ಯದ ಹಜಾರಿಬಾಗ್ ಜಿಲ್ಲೆಯಲ್ಲಿ ರಾಮ ನವಮಿ ಆಚರಣೆಯ ಸಂದರ್ಭದಲ್ಲಿ ಕತ್ತಿ ಮತ್ತು ದೊಣ್ಣೆಗಳ ಪ್ರದರ್ಶನದ ವೇಳೆ ಸುಮಾರು 700 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಜಾರ್ಖಂಡ್ ರಾಜ್ಯದ ಹಜಾರಿಬಾಗ್ ಜಿಲ್ಲೆಯಲ್ಲಿ ರಾಮ ನವಮಿ ಆಚರಣೆಯ ಸಂದರ್ಭದಲ್ಲಿ ಕತ್ತಿ ಮತ್ತು ದೊಣ್ಣೆಗಳ ಪ್ರದರ್ಶನದ ವೇಳೆ ಸುಮಾರು 700 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ಎಂಟು ಗಂಟೆ ಸುಮಾರಿಗೆ ಆರಂಭವಾದ ರಾಮನವಮಿ ಉತ್ಸವ ಶನಿವಾರ ಸಂಜೆ ಮುಕ್ತಾಯವಾಯಿತು. ಧಾರಾಕಾರ ಮಳೆಯ ನಡುವೆ ಬೋಡುಮ್ ಬಜಾರ್‌ನಲ್ಲಿ ಶತಮಾನಗಳಷ್ಟು ಹಳೆಯದಾದ ಉತ್ಸವದಲ್ಲಿ 2 ಲಕ್ಷಕ್ಕೂ ಜನರು ಭಾಗವಹಿಸಿದ್ದರು ಎಂದು ಅವರು ಹೇಳಿದರು.

ಉತ್ಸವದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಹಜಾರಿಬಾಗ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ(ಎಚ್‌ಎಂಸಿಎಚ್) 15 ವೈದ್ಯಕೀಯ ಶಿಬಿರಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು.

ಸಾಂಪ್ರದಾಯಿಕ ಆಯುಧಗಳೊಂದಿಗೆ ಪ್ರದರ್ಶನ ನಡೆಯುತ್ತಿದ್ದಾಗ ಸುಮಾರು 700 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೆಚ್ಚಿನವರಿಗೆ ಶಿಬಿರದಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹಲವರನ್ನು ವಿವಿಧ ಆಸ್ಪತ್ರೆಗಳಿಗೆ ಶಿಫಾರಸು ಮಾಡಲಾಗಿದೆ ಎಂದು ಎಚ್‌ಎಂಸಿಎಚ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT