ಬಿಹಾರದಲ್ಲಿ ಪೊಲೀಸ್ ಭದ್ರತೆ 
ದೇಶ

ಹಿಂಸಾಚಾರಗ್ರಸ್ತ ಬಿಹಾರಕ್ಕೆ 10 ಸಿಎಪಿಎಫ್ ಪಡೆ ರವಾನೆ

ರಾಮನವಮಿ ಆಚರಣೆಯ ವೇಳೆ ಹಿಂಸಾಚಾರ ನಡೆದಿದ್ದ ಬಿಹಾರಕ್ಕೆ,  10 ಸಿಎಪಿಎಫ್ ಪಡೆಗಳನ್ನು ರವಾನೆ ಮಾಡಲಾಗಿದೆ.

ನವದೆಹಲಿ: ರಾಮನವಮಿ ಆಚರಣೆಯ ವೇಳೆ ಹಿಂಸಾಚಾರ ನಡೆದಿದ್ದ ಬಿಹಾರಕ್ಕೆ,  10 ಸಿಎಪಿಎಫ್ ಪಡೆಗಳನ್ನು ರವಾನೆ ಮಾಡಲಾಗಿದೆ. ರಾಮನವಮಿ ಆಚರಣೆಯ ವೇಳೆ ಬಿಹಾರದ ನಳಂದದ ಬಿಹಾರ್ ಶರೀಫ್ ಹಾಗೂ ಸಸ್ರಾಮ್ ಗಳಲ್ಲಿ ಹಿಂಸಾಚಾರ ನಡೆದಿತ್ತು. 

ಈ ಹಿನ್ನೆಲೆಯಲ್ಲಿ, 1000 ಸಿಬ್ಬಂದಿಗಳನ್ನೊಳಗೊಂಡ ಸಿಎಪಿಎಫ್ ಪಡೆಯನ್ನು ರವಾನಿಸಲಾಗಿದೆ ಈ ಪೈಕಿ ರಿಸರ್ವ್ ಪೊಲೀಸ್ ಫೋರ್ಸ್ (CRPF) ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ (ITBP) ನಿಂದ ಮತ್ತು  ಸಶಸ್ತ್ರ ಸೀಮಾ ಬಲ್ (SSB) ಗಳಿಂದ ಕಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಬಿಹಾರದಲ್ಲಿ ಹಿಂಸಾಚಾರ ನಡೆದ ಪ್ರದೇಶಗಳಲ್ಲಿ ವದಂತಿ ಹಬ್ಬಿಸುವವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ಪೊಲೀಸ್ ಅಧಿಕಾರಿಗಳು ಜನತೆಗೆ ಮನವಿ ಮಾಡಿದ್ದಾರೆ. ಹಿಂಸಾಚಾರ ಘಟನೆಯಲ್ಲಿ ನಳಂದದ ಬಿಹಾರ್ ಶರೀಫ್ ನಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು ಸಾಧಿಸಿದು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ