ಸಾಂದರ್ಭಿಕ ಚಿತ್ರ 
ದೇಶ

ಆಂಧ್ರ ಪ್ರದೇಶ: ಅಪ್ರಾಪ್ತ ವಿದ್ಯಾರ್ಥಿನಿಯನ್ನು ಎರಡನೇ ಮದುವೆಯಾದ 33 ವರ್ಷದ ಶಿಕ್ಷಕನ ಬಂಧನ

ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮದುವೆಯಾಗುವಂತೆ ವಂಚಿಸಿದ ಆರೋಪದ ಮೇಲೆ ಶಿಕ್ಷಕನನ್ನು ಆಂಧ್ರಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

ಅಮರಾವತಿ: ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮದುವೆಯಾಗುವಂತೆ ವಂಚಿಸಿದ ಆರೋಪದ ಮೇಲೆ ಶಿಕ್ಷಕನನ್ನು ಆಂಧ್ರಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

ಚಿತ್ತೂರು ಜಿಲ್ಲೆಯ ಗಂಗಾವರಂನಲ್ಲಿರುವ ಖಾಸಗಿ ಜೂನಿಯರ್ ಕಾಲೇಜಿನ ಶಿಕ್ಷಕ ಚಲಪತಿ (33) 17 ವರ್ಷದ ವಿದ್ಯಾರ್ಥಿಯನ್ನು ವಿವಾಹವಾಗಿದ್ದರು. ಬಾಲಕಿ ದ್ವಿತೀಯ ವರ್ಷದ ಪಿಯು (12ನೇ ತರಗತಿ) ವಿದ್ಯಾರ್ಥಿನಿಯಾಗಿದ್ದು, ಈಗಾಗಲೇ ವಿವಾಹವಾಗಿದ್ದ ಶಿಕ್ಷಕ ಮಾರ್ಚ್ 29 ರಂದು ಪರೀಕ್ಷೆ ಮುಗಿದ ತಕ್ಷಣ ಬೆಂಗಳೂರಿಗೆ ಕರೆದೊಯ್ದು ಆಕೆಯನ್ನು ಮದುವೆ ಆಗಿದ್ದಾನೆ.

ಬಾಲಕಿಯ ಕುಟುಂಬದವರು ನೀಡಿದ ದೂರಿನ ಮೇರೆಗೆ ಪೊಲೀಸರು ಚಲಪತಿ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿ ಮಾರ್ಚ್ 31ರಂದು ಬಂಧಿಸಿದ್ದರು.

ಬೊಮ್ಮನಪಲ್ಲಿ ಗ್ರಾಮದವರಾದ ಚಲಪತಿ ಮೂರು ವರ್ಷಗಳ ಹಿಂದೆ ಅದೇ ಗ್ರಾಮದ ಯುವತಿಯೊಂದಿಗೆ ಪ್ರೇಮ ವಿವಾಹವಾಗಿದ್ದರು. ಅವರಿಗೆ ಒಬ್ಬ ಮಗನಿದ್ದಾನೆ. ಅವರ ಪತ್ನಿ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT