ದೇಶ

ಅತ್ಯಂತ ಜನಪ್ರಿಯ ಜಾಗತಿಕ ನಾಯಕರ ಪಟ್ಟಿಯಲ್ಲಿ ಮೋದಿ ನಂ.1: ಶೇ.76 ರಷ್ಟು ಮತ

Srinivas Rao BV

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಜಾಗತಿಕ ಮಟ್ಟದಲ್ಲಿ ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದು, ಈ ಅಂಕಿ- ಅಂಶಗಳನ್ನು ಮಾರ್ನಿಂಗ್ ಕನ್ಸಲ್ಟ್ ಸಂಸ್ಥೆ ಬಿಡುಗಡೆ ಮಾಡಿದೆ. ಜನಪ್ರಿಯತೆಯಲ್ಲಿ ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಅವರನ್ನೂ ಪ್ರಧಾನಿ ಮೋದಿ ಹಿಂದಿಕ್ಕಿದ್ದು, ಶೇ.76 ರಷ್ಟು ಮತಗಳನ್ನು ಪಡೆದಿದ್ದಾರೆ. 

ಆದರೆ ಫೆಬ್ರವರಿಗೆ ಹೋಲಿಕೆ ಮಾಡಿದರೆ ಪ್ರಧಾನಿ ಮೋದಿ ಅವರ ಜನಪ್ರಿಯತೆಯಲ್ಲಿ ಸ್ವಲ್ಪ ಮಟ್ಟದ ಕುಸಿತ ಕಂಡುಬಂದಿದ್ದು ಶೇ.78 ರಿಂದ 76 ಕ್ಕೆ ಇಳಿಕೆಯಾಗಿದೆ. 

ಪ್ರಧಾನಿ ಮೋದಿ ಅವರ ಜನಪ್ರಿಯತೆಯ ಹತ್ತಿರಕ್ಕೂ ಯಾವುದೇ ಜಾಗತಿಕ ಮಟ್ಟದ ನಾಯಕ ಬರಲು ಸಾಧ್ಯವಾಗಿಲ್ಲ ಎಂದು ಮಾರ್ನಿಂಗ್ ಕನ್ಸಲ್ಟ್ ಹೇಳಿದೆ. ಪ್ರಧಾನಿ ಮೋದಿ ಸ್ಥಾನದಲ್ಲಿ ಮೆಕ್ಸೋದ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಶೇ.61 ರಷ್ಟು ಮತಗಳ ಮೂಲಕ 2 ನೇ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಅಲ್ಬನೀಸ್ ಶೇ.55 ರಷ್ಟು ಮತಗಳೊಂದಿಗೆ 3 ನೇ ಸ್ಥಾನದಲ್ಲಿದ್ದಾರೆ.

ಇದೇ ವೇಳೆ, ಇಟಲಿಯ ಪಿಎಂ ಜಾರ್ಜಿಯಾ ಮೆಲೋನಿ ಶೇ.49 ರಷ್ಟು  ಅನುಮೋದನೆಯನ್ನು ಪಡೆದು ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಬ್ರೆಜಿಲ್ ಅಧ್ಯಕ್ಷ ಲುಲಾ ಡಿ ಸಿಲ್ವಾ ಅವರು ಜಾರ್ಜಿಯಾ ಮೆಲೋನಿಯಂತೆ 49 ಶೇಕಡಾ ರೇಟಿಂಗ್ ಪಡೆದಿದ್ದಾರೆ ಆದರೆ ಪಟ್ಟಿಯಲ್ಲಿ 5 ನೇ ಸ್ಥಾನದಲ್ಲಿದ್ದಾರೆ.

ವಿಶ್ವದ ಸೂಪರ್ ಪವರ್ ರಾಷ್ಟ್ರಗಳಲ್ಲಿ ಒಂದಾದ ಯುಎಸ್ ಅಧ್ಯಕ್ಷ ಜೋ ಬಿಡನ್ ಅವರು ಗ್ಲೋಬಲ್ ಲೀಡರ್ ಅಪ್ರೂವಲ್ ರೇಟಿಂಗ್ ಪಟ್ಟಿಯಲ್ಲಿ 6 ನೇ ಸ್ಥಾನದಲ್ಲಿದ್ದಾರೆ. ಬಿಡೆನ್ ಕೇವಲ ಶೇಕಡ 41ರಷ್ಟು ಮತ ಪಡೆದಿದ್ದಾರೆ.

ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು 39 ಶೇಕಡಾ ಅನುಮೋದನೆ ರೇಟಿಂಗ್‌ನೊಂದಿಗೆ ಏಳನೇ ಸ್ಥಾನದಲ್ಲಿದ್ದಾರೆ. ಸ್ಪೇನ್‌ನ ಪ್ರಧಾನ ಮಂತ್ರಿ ಪೆಡ್ರೊ ಸ್ಯಾಂಚೆಜ್ 38 ಶೇ, ಮತಗಳೊಂದಿಗೆ ಎಂಟನೇ ಸ್ಥಾನದಲ್ಲಿದ್ದಾರೆ.

ಒಂಬತ್ತನೇ ಸ್ಥಾನದಲ್ಲಿರುವ ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್  ಶೇ.35 ರಷ್ಟು ರೇಟಿಂಗ್ ಹೊಂದಿದ್ದಾರೆ. ಬ್ರಿಟನ್‌ನ ಪ್ರಧಾನಿ ರಿಷಿ ಸುನಕ್ 10 ನೇ ಸ್ಥಾನದಲ್ಲಿದ್ದಾರೆ. ಅವರ ರೇಟಿಂಗ್ ಶೇ.34 ರಷ್ಟಿದೆ.
 

SCROLL FOR NEXT