ಜೈಶಂಕರ್ 
ದೇಶ

ಪಾಶ್ಚಿಮಾತ್ಯರಿಗೆ ಇತರರ ವಿಷಯದಲ್ಲಿ ಮೂಗು ತೂರಿಸುವ ಕೆಟ್ಟಚಟವಿದೆ: ಅಮೆರಿಕಾ-ಜರ್ಮನಿ ವಿರುದ್ಧ ಜೈಶಂಕರ್ ಗರಂ

ಪಾಶ್ಚಿಮಾತ್ಯ ದೇಶಗಳು ಇತರ ದೇಶಗಳ ಆಂತರಿಕ ವಿಷಯಗಳಲ್ಲಿ ಮೂಗು ತೂರಿಸುವ ಕೆಟ್ಟಚಟವಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಟೀಕಿಸಿದ್ದಾರೆ.

ಬೆಂಗಳೂರು: ಪಾಶ್ಚಿಮಾತ್ಯ ದೇಶಗಳು ಇತರ ದೇಶಗಳ ಆಂತರಿಕ ವಿಷಯಗಳಲ್ಲಿ ಮೂಗು ತೂರಿಸುವ ಕೆಟ್ಟಚಟವಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಟೀಕಿಸಿದ್ದಾರೆ.

ಇತರ ದೇಶಗಳ ಆಂತರಿಕ ವ್ಯವಹಾರಗಳ ಬಗ್ಗೆ ಪ್ರತಿಕ್ರಿಯಿಸುವ ಹಕ್ಕನ್ನು ದೇವರೇ ತಮಗೆ ಕರುಣಿಸಿದ್ದಾನೆಂದು ಪಶ್ಚಿಮವು ಭಾವಿಸುತ್ತದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮತ್ತು ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸಂಸದ ಪಿಸಿ ಮೋಹನ್ ಅವರು ಕಬ್ಬನ್ ಪಾರ್ಕ್‌ನಲ್ಲಿ ಆಯೋಜಿಸಿದ್ದ 'ಭೇಟಿ ಮತ್ತು ಶುಭಾಶಯ' ಸಂವಾದದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿದ ಬಗ್ಗೆ ಜರ್ಮನಿ ಮತ್ತು ಅಮೆರಿಕದ ಟೀಕೆಗಳಿಗೆ ವಿದೇಶಾಂಗ ಸಚಿವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಪಾಶ್ಚಿಮಾತ್ಯರು ಭಾರತದ ಬಗ್ಗೆ ಹೇಳಿಕೆಗಳನ್ನು ನೀಡುವುದನ್ನು ನಾವು ನೋಡಿದ್ದೇವೆ. ಇದಕ್ಕೆ ಎರಡು ಕಾರಣಗಳಿವೆ. ಪಾಶ್ಚಾತ್ಯರು ಇತರರ ಬಗ್ಗೆ ಕಾಮೆಂಟ್ ಮಾಡುವ ಕೆಟ್ಟ ಅಭ್ಯಾಸವನ್ನು ಹೊಂದಿರುವುದೇ ಇದಕ್ಕೆ ಕಾರಣ. ಇದು ಯಾವುದೋ ಒಂದು ರೀತಿಯ ದೇವರು ಕೊಟ್ಟ ಹಕ್ಕು ಎಂದು ಅವರು ಭಾವಿಸುತ್ತಾರೆ. ಹೀಗೆ ಮಾಡುತ್ತಾ ಹೋದರೆ ಬೇರೆಯವರು ಕೂಡ ಕಾಮೆಂಟ್ ಮಾಡಲು ಶುರುಮಾಡುತ್ತಾರೆ. ಅದು ನಡೆದಾಗ ಅವರು ಅದನ್ನು ಇಷ್ಟಪಡುವುದಿಲ್ಲ ಎಂಬುದನ್ನು ಅವರು ಅನುಭವದಿಂದ ಮಾತ್ರ ಕಲಿಯಬೇಕಾಗುತ್ತದೆ. ಅದು ನಡೆಯುತ್ತಿದೆ ಎಂದು ಹೇಳಿದರು.

ಇದೇ ವೇಳೆ ರಾಜಕೀಯ ಪಕ್ಷಗಳ ಬಿಟ್ಟಿ ಭಾಗ್ಯಗಳನ್ನು ಟೀಕಿಸಿದ ಜೈಶಂಕರ್, ಬಿಟ್ಟಿ ಭಾಗ್ಯಗಳನ್ನು ನೀಡುವ ಪರಿಪಾಠ ದೆಹಲಿಯಿಂದ ಶುರುವಾಗಿ ದೇಶದ ಇತರ ಭಾಗಗಳಿಗೂ ಹಬ್ಬುತ್ತಿರುವುದು ಆತಂಕಕಾರಿ. ಅಂತಹ ಸರ್ಕಾರಗಳಿಗೆ ಸಂಪನ್ಮೂಲ ಕ್ರೋಢೀಕರಣ ದೊಡ್ಡ ಸಮಸ್ಯೆ ಆಗಿರುತ್ತದೆ. ಆದರೂ ರಾಜಕೀಯ ಲಾಭಕ್ಕಾಗಿ ಇಂತಹ ಯೋಜನೆಗಳನ್ನು ಘೋಷಿಸಿದಾಗ ಇದರ ಬೆಲೆ ಬೇರೊಬ್ಬರು ತೆರಬೇಕಾಗುತ್ತದೆ ಎಂದರು.

ಮೋದಿ ಉಪನಾಮ ವಿವಾದಕ್ಕೆ ಸಂಬಂಧಿಸಿದಂತೆ ಗುಜರಾತ್ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿದ್ದು 2 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಇದೇ ವೇಳೆ ಶಿಕ್ಷೆಯನ್ನು ನಂತರ 30 ದಿನಗಳವರೆಗೆ ಅಮಾನತುಗೊಳಿಸಲಾಗಿದ್ದು ಆ ಸಮಯದಲ್ಲಿ ರಾಹುಲ್ ತನ್ನ ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಬೇಕಿದೆ. ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ಘೋಷಣೆ ನಂತರ ಅವರನ್ನು ಲೋಕಸಭೆಯ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಲಾಯಿತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT