ದೇಶ

ದೇಶದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳ: ಆತಂಕಪಡುವ ಅಗತ್ಯವಿಲ್ಲ- ಮನ್ಸುಖ್ ಮಾಂಡವೀಯಾ

Nagaraja AB

ನವದೆಹಲಿ: ದೇಶದಲ್ಲಿ  ಕೋವಿಡ್-19 ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಸೋಮವಾರ ಪ್ರತಿಕ್ರಿಯಿಸಿರುವ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ, ಆಸ್ಪತ್ರೆಯಲ್ಲಿ ದಾಖಲಾತಿ ಹೆಚ್ಚಳಕ್ಕೆ ದೇಶಾದ್ಯಂತ ಹರಡುತ್ತಿರುವ ಓಮಿಕ್ರಾನ್ ಹೂಸ ರೂಪಾಂತರ ಕಾರಣವಲ್ಲಾ, ಜನರು ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.  

ನಾವು ಜಾಗರೂಕರಾಗಿರಬೇಕು ಆದರೆ ಚಿಂತಿಸಬೇಕಾಗಿಲ್ಲ. ಪ್ರಸ್ತುತ ದೇಶದಲ್ಲಿ ಆಸ್ಪತ್ರೆಯಲ್ಲಿ ದಾಖಲಾಗುವವರ ಸಂಖ್ಯೆ ಹೆಚ್ಚಳಕ್ಕೆ ಓಮಿಕ್ರಾನ್‌ನ ಉಪ-ರೂಪಾಂತರ ಕಾರಣವಲ್ಲಾ, ಇನ್ನಾದರೂ ಎಚ್ಚೆತ್ತುಕೊಳ್ಳುವ ಅಗತ್ಯವಿದೆ ಎಂದು ಸಚಿವರು ಹೇಳಿದರು. 

ದೇಶದಲ್ಲಿ ಏಪ್ರಿಲ್ 1 ರಿಂದ ಏಪ್ರಿಲ್ 2ರ ನಡುವೆ ದೈನಂದಿನ ಹೊಸ ಪ್ರಕರಣಗಳ ಸಂಖ್ಯೆ 2,994 ರಿಂದ 3,824ಕ್ಕೆ ಮತ್ತು ಏಪ್ರಿಲ್ 3ರಂದು 3,641 ಪ್ರಕರಣ ದಾಖಲಾಗುವುದರೊಂದಿಗೆ ದೇಶದಲ್ಲಿ ಕೆಲವು ದಿನಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಾಗುತ್ತಿದೆ. ಇಂದು ಪಾಸಿಟಿವಿಟಿ ದರ ಶೇ. 6.12 ರಷ್ಟಿದ್ದರೆ, ವಾರದ ಪಾಸಿಟಿವಿಟಿ ದರ ಶೇ. 2.45 ರಷ್ಟಿತ್ತು. 

ಕಳೆದ 24 ಗಂಟೆಗಳಲ್ಲಿ ಒಟ್ಟು 1,800 ರೋಗಿಗಳು ಕೋವಿಡ್ ನಿಂದ ಗುಣಮುಖರಾಗಿದ್ದು, ದೇಶದಲ್ಲಿ ಗುಣಮುಖರಾದವರ ಒಟ್ಟು ಸಂಖ್ಯೆ 4,41,75,135 ಆಗಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 20,219 ರಷ್ಟಿದೆ. ದೇಶಾದ್ಯಂತ ಕಳೆದ ವಾರದಲ್ಲಿ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಪರಿಷ್ಕೃತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.  

ಬ್ಯಾಕ್ಟೀರಿಯಾ ಸೋಂಕಿನ  ಸಂದೇಹವಿಲ್ಲದಿದ್ದರೆ ಪ್ರತಿಜೀವಕಗಳನ್ನು ಬಳಸಬಾರದು. ಇತರ ಸೋಂಕುಗಳೊಂದಿಗೆ ಕೋವಿಡ್-19 ಸೋಂಕು ತಗುಲುವ ಸಾಧ್ಯತೆಯನ್ನು ಪರಿಗಣಿಸಬೇಕು ಎಂದು ಪರಿಷ್ಕೃತ ಮಾರ್ಗಸೂಚಿಯಲ್ಲಿ ಹೇಳಲಾಗಿದೆ. 

SCROLL FOR NEXT