ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಕೊರೋನಾ ಹೆಚ್ಚಳ: ದೇಶದಲ್ಲಿಂದು 3,641 ಹೊಸ ಕೇಸ್ ಪತ್ತೆ, 20 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣಗಳ ಸಂಖ್ಯೆ!

ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,641 ಹೊಸ ಪ್ರಕರಣಗಳು ಪತ್ತೆಯಾಗಿವೆ.

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,641 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,26,246ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,892ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 20,219ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,41,75,135ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 1,33,153 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ  92,18,09,525 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 220,66,11,814 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT