ಸಾಂದರ್ಭಿಕ ಚಿತ್ರ 
ದೇಶ

ಮೂವರು ಯೋಧರಿಂದ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ; ಇಬ್ಬರ ಬಂಧನ

ಆಘಾತಕಾರಿ ಘಟನೆಯೊಂದರಲ್ಲಿ ಭಾರತೀಯ ಸೇನೆಯ ಮೂವರು ಯೋಧರು ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಇಬ್ಬರು ಮಹಿಳೆಯರು ಉತ್ತರ ಪ್ರದೇಶದ ಝಾನ್ಸಿಯ ಜಿಆರ್‌ಪಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಝಾನ್ಸಿ: ಆಘಾತಕಾರಿ ಘಟನೆಯೊಂದರಲ್ಲಿ ಭಾರತೀಯ ಸೇನೆಯ ಮೂವರು ಯೋಧರು ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಇಬ್ಬರು ಮಹಿಳೆಯರು ಉತ್ತರ ಪ್ರದೇಶದ ಝಾನ್ಸಿಯ ಜಿಆರ್‌ಪಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಝಾನ್ಸಿ ರೈಲು ನಿಲ್ದಾಣದಲ್ಲಿ ನಿಲ್ಲಿಸಿದ್ದ ಸ್ಟೇಷನರಿ ಕೋಚ್‌ನಲ್ಲಿ ಮೂವರು ಯೋಧರು ತಮ್ಮ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಇಬ್ಬರು ಯೋಧರನ್ನು ಬಂಧಿಸಿದ್ದು, ಮತ್ತೊಬ್ಬ ಯೋಧ ತಲೆಮರೆಸಿಕೊಂಡಿದ್ದಾರೆ.

ಯೋಧರು ತಾವು ಫೋನ್ ಕಳೆದುಕೊಂಡಿದ್ದಾಗೆ ಹೇಳಿಕೊಂಡು ಮಹಿಳೆಯರ ಮೊಬೈಲ್ ಕೇಳಿದ್ದಾರೆ. ನಂತರ ಆ ಮಹಿಳೆಯರನ್ನು ಪ್ಲಾಟ್‌ಫಾರ್ಮ್ 7 ರಲ್ಲಿ ನಿಲ್ಲಿಸಿದ್ದ ರೈಲ್ವೆ ಕೋಚ್‌ಗೆ ಕರೆದೊಯ್ದು ಅವರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಜಿಆರ್‌ಪಿ ಸರ್ಕಲ್ ಅಧಿಕಾರಿ ಮೊಹಮ್ಮದ್ ನಯೀಮ್ ಅನ್ಸಾರಿ ತಿಳಿಸಿದ್ದಾರೆ.

ಜವಾನರಾದ ಸಂದೀಪ್, ರವೀಂದ್ರ ಮತ್ತು ಸುರೇಶ್ ವಿರುದ್ಧ ಪ್ರಕರಣ ದಾಖಲಿಸಿದ್ದು, ಅವರಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಜಿಆರ್‌ಪಿ ಠಾಣೆಯ ಪೊಲೀಸ್ ಅಧಿಕಾರಿಗಳು ರೈಲ್ವೆ ಕೋಚ್ ಅನ್ನು ಪರಿಶೀಲಿಸಿದ್ದಾರೆ ಮತ್ತು ಘಟನೆಯ ಬಗ್ಗೆ ಭಾರತೀಯ ಸೇನೆಗೆ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ನನಗೆ 'CM ವಿಜಯ್' ಕಂಡ್ರೆ ಅಸೂಯೆ: ಸಾರ್ವಜನಿಕವಾಗಿ ಸತ್ಯ ಒಪ್ಪಿಕೊಂಡ ಆಂಧ್ರ DCM ಪವನ್ ಕಲ್ಯಾಣ್!

SCROLL FOR NEXT