ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಇದು ಮಿತ್ರಕಾಲ ವಿರುದ್ಧದ ಹೋರಾಟ, ಸತ್ಯವೇ ನನ್ನ ಅಸ್ತ್ರ: ರಾಹುಲ್ ಗಾಂಧಿ

2019ರ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಜಾಮೀನು ಪಡೆದ ಟ್ವೀಟ್ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದು ಪ್ರಜಾಪ್ರಭುತ್ವವನ್ನು ಉಳಿಸಲು "ಮಿತ್ರಕಾಲ" ವಿರುದ್ಧದ ಹೋರಾಟ. ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರವಾಗಿದೆ ಎಂದು ಸೋಮವಾರ ಹೇಳಿದ್ದಾರೆ.

ರಾಹುಲ್ ಗಾಂಧಿ
Lingaraj Badiger
Updated On : 3 Apr 2023, 7:12 pm

ನವದೆಹಲಿ: 2019ರ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಜಾಮೀನು ಪಡೆದ ಟ್ವೀಟ್ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದು ಪ್ರಜಾಪ್ರಭುತ್ವವನ್ನು ಉಳಿಸಲು "ಮಿತ್ರಕಾಲ" ವಿರುದ್ಧದ ಹೋರಾಟ. ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರವಾಗಿದೆ ಎಂದು ಸೋಮವಾರ ಹೇಳಿದ್ದಾರೆ.

ಇಂದು ಕೆಲವೇ ನಿಮಿಷಗಳಲ್ಲಿ ಸೂರತ್ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ ನಂತರ, ಹಿಂದಿಯಲ್ಲಿ ಟ್ವೀಟ್‌ ಮಾಡಿದ ರಾಹುಲ್ ಗಾಂಧಿ, "ಇದು ಪ್ರಜಾಪ್ರಭುತ್ವವನ್ನು ಉಳಿಸಲು 'ಮಿತ್ರಕಾಲ'ದ ವಿರುದ್ಧದ ಹೋರಾಟ. ಈ ಹೋರಾಟದಲ್ಲಿ, ಸತ್ಯವೇ ನನ್ನ ಅಸ್ತ್ರ, ಮತ್ತು ಸತ್ಯವೇ ನನ್ನ ಆಸರೆ!" ಎಂದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಮೋದಿ ಅವರು ತಮ್ಮ ಬಂಡವಾಳಶಾಹಿ ಮಿತ್ರರಿಗೆ ನೆರವು ನೀಡುತ್ತಿದ್ದಾರೆ ಎಂಬರ್ಥದಲ್ಲಿ ರಾಹುಲ್ ಗಾಂಧಿ ಟೀಕಿಸಿದ್ದಾರೆ.

Advertisement

Advertisement

ಇದನ್ನು ಓದಿ: ಮಾನಹಾನಿ ಪ್ರಕರಣ: ಮೇಲ್ಮನವಿ ಸಲ್ಲಿಸಿದ ರಾಹುಲ್ ಗಾಂಧಿಗೆ ಜಾಮೀನು, ವಿಚಾರಣೆ ಏಪ್ರಿಲ್ 13ಕ್ಕೆ ಮುಂದೂಡಿಕೆ

ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ನೀಡಿರುವ ಶಿಕ್ಷೆಯನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಇಂದು ಮೇಲ್ಮನವಿ ಸಲ್ಲಿಸಿದರು. ಮೇಲ್ಮನವಿ ಸ್ವೀಕರಿಸಿದ ಕೋರ್ಟ್, ಆರೋಪಿ ಕಾಂಗ್ರೆಸ್ ನಾಯಕನಿಗೆ ಜಾಮೀನು ಮಂಜೂರು ಮಾಡಿ, ವಿಚಾರಣೆಯನ್ನು ಏಪ್ರಿಲ್ 13ಕ್ಕೆ ಮುಂದೂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement