ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಕೊರೋನಾ ಏರಿಕೆ: ದೇಶದಲ್ಲಿಂದು 5,335 ಸೋಂಕು ಪತ್ತೆ, 6 ತಿಂಗಳಲ್ಲೇ ಗರಿಷ್ಠ, 13 ಮಂದಿ ಸಾವು

ಭಾರತದಲ್ಲಿ ಕೊರೋನಾ ಸಾಂಕ್ರಾಮಿಕ ಪ್ರಮಾಣ ಮತ್ತೆ ಹೆಚ್ಚಾಗುತ್ತಿದ್ದು, ಗುರುವಾರ ಒಂದೇ ದಿನ 5,335 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದು 6 ತಿಂಗಳಲ್ಲೇ ದಾಖಲಾದ ಗರಿಷ್ಠ ಸಂಖ್ಯೆಯಾಗಿದೆ.

ನವದೆಹಲಿ: ಭಾರತದಲ್ಲಿ ಕೊರೋನಾ ಸಾಂಕ್ರಾಮಿಕ ಪ್ರಮಾಣ ಮತ್ತೆ ಹೆಚ್ಚಾಗುತ್ತಿದ್ದು, ಗುರುವಾರ ಒಂದೇ ದಿನ 5,335 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದು 6 ತಿಂಗಳಲ್ಲೇ ದಾಖಲಾದ ಗರಿಷ್ಠ ಸಂಖ್ಯೆಯಾಗಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,39,054ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 530929ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 25,587ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,41,82,538ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 1,60,742 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ  92,23,25,605 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಜನರಿಗೆ 220,66,18,366 ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್