ದೇಶ

ಪಿಎಂ ಫಸಲ್ ವಿಮಾ ಯೋಜನೆಯ ನಿಯಮಗಳಲ್ಲಿ ಬದಲಾವಣೆಗೆ ಆಗ್ರಹಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಗೆಹ್ಲೋಟ್!

Vishwanath S

ಜೈಪುರ: 'ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ' ನಿಯಮಗಳಲ್ಲಿ ಸಡಿಲಿಕೆ ಮಾಡಿ. ಇದರಿಂದ ಸಂತ್ರಸ್ತ ರೈತರಿಗೆ ಬೆಳೆ ನಷ್ಟವಾದ ತಕ್ಷಣ ಪರಿಹಾರ ಸಿಗುತ್ತದೆ. ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಕೇವಲ ಎರಡು ಹೆಕ್ಟೇರ್ ಭೂಮಿಯಲ್ಲಿನ ಬೆಳೆ ನಷ್ಟಕ್ಕೆ ರೈತರಿಗೆ ಪರಿಹಾರ ನೀಡುವ ನಿಯಮವನ್ನು ಬದಲಾಯಿಸಲು ಮತ್ತು ಈ ಮಿತಿಯನ್ನು ಹೆಚ್ಚಿಸುವಂತೆ ಕೋರಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ರೈತರು ಬೆಳೆ ಹಾನಿಗೆ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ (ಎಸ್‌ಡಿಆರ್‌ಎಫ್) ತಕ್ಷಣದ ನೆರವು ಪಡೆಯಲು ಅಕ್ಟೋಬರ್ 2022 ರಲ್ಲಿ ಭಾರತ ಸರ್ಕಾರ ಹೊರಡಿಸಿದ ಹೊಸ ನಿಯಮಗಳನ್ನು ತಿದ್ದುಪಡಿ ಮಾಡುವಂತೆ ಮನವಿ ಮಾಡಿದ್ದಾರೆ.

ನಿಯಮದಿಂದಾಗಿ ರೈತರಿಗೆ ಬೆಳೆ ಹಾನಿಗೆ ತಕ್ಷಣ ಪರಿಹಾರ ಸಿಗುತ್ತಿಲ್ಲ ಎಂದು ಮುಖ್ಯಮಂತ್ರಿ ಪತ್ರ ಬರೆದಿದ್ದಾರೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಿಂದ ವಿಪತ್ತುಗಳ ಸಂದರ್ಭದಲ್ಲಿ ರೈತರು ಪಡೆಯಬೇಕಾದ ವಿಮಾ ಮೊತ್ತವನ್ನು ಲೆಕ್ಕಾಚಾರ ಮಾಡುವುದು ಸಂಕೀರ್ಣ ಮತ್ತು ಸುದೀರ್ಘ ಪ್ರಕ್ರಿಯೆಯಾಗಿದೆ. ಎಸ್‌ಡಿಆರ್‌ಎಫ್ ನೆರವಿನ ವಿತರಣೆಯಲ್ಲಿ ಹಲವಾರು ವಿಳಂಬಗಳು ನಡೆಯುತ್ತಿವೆ ಎಂದು ಸಿಎಂ ಹೇಳಿದರು.

ಅಕ್ಟೋಬರ್ 2022ರಲ್ಲಿ ಹೊಸ ನಿಯಮಗಳು ಜಾರಿಗೆ ಬರುವ ಮೊದಲು, ರೈತರು ಎಸ್‌ಡಿಆರ್‌ಎಫ್ ಅಡಿಯಲ್ಲಿ ತ್ವರಿತ ಆರ್ಥಿಕ ನೆರವು ಪಡೆಯುತ್ತಿದ್ದರು ಎಂದು ಗೆಹ್ಲೋಟ್ ಬರೆದಿದ್ದಾರೆ. ಆದ್ದರಿಂದ, ಎಸ್‌ಡಿಆರ್‌ಎಫ್ ಅಡಿಯಲ್ಲಿ ತಕ್ಷಣದ ನೆರವು ನೀಡಲು ನಿಯಮಗಳನ್ನು ತಿದ್ದುಪಡಿ ಮಾಡಬೇಕು ಎಂದು ಕೋರಿದ್ದಾರೆ.

SCROLL FOR NEXT