ತಿರಂಗಾ ನಡಿಗೆಯಲ್ಲಿ ವಿಪಕ್ಷ ಸಂಸದರು 
ದೇಶ

ಸಂಸತ್ತಿನಿಂದ ವಿಜಯ್ ಚೌಕವರೆಗೂ ವಿಪಕ್ಷ ಸಂಸದರಿಂದ ‘ತಿರಂಗಾ ನಡಿಗೆ'- ವಿಡಿಯೋ

ಬಜೆಟ್ ಅಧಿವೇಶನದ ಕೊನೆಯ ದಿನವಾದ ಇಂದು ಪ್ರತಿಪಕ್ಷಗಳ ಸದಸ್ಯರು ಸಂಸತ್ತಿನಿಂದ ವಿಜಯ್ ಚೌಕದವರೆಗೂ ತಿರಂಗಾ ಹಿಡಿದು ಪ್ರತಿಭಟನೆ ನಡೆಸಿದರು.

ನವದೆಹಲಿ: ಬಜೆಟ್ ಅಧಿವೇಶನದ ಕೊನೆಯ ದಿನವಾದ ಇಂದು ಪ್ರತಿಪಕ್ಷಗಳ ಸದಸ್ಯರು ಸಂಸತ್ತಿನಿಂದ ವಿಜಯ್ ಚೌಕದವರೆಗೂ ತಿರಂಗಾ ಹಿಡಿದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಕಾಂಗ್ರೆಸ್ ಮುಖಂಡ ಕೆ.ಸಿ. ವೇಣುಗೋಪಾಲ್, ಸರ್ಕಾರ ಸಂಸತ್ ಕಲಾಪ ನಡೆಯಲು ಬಿಡುತ್ತಿಲ್ಲ. ಅದಾನಿ ಹಗರಣ ಕುರಿತು ಚರ್ಚೆ ಅವರು ಏಕೆ ಅವಕಾಶ ಮಾಡಿಕೊಡುತ್ತಿಲ್ಲ ಎಂದು ಪ್ರಶ್ನಿಸಿದರು. ಬಜೆಟ್ ಅಧಿವೇಶನ ಆರಂಭವಾದಾಗಿನಿಂದಲೂ ಸಂಸತ್ತಿನ ಉಭಯ ಸದನಗಳ ಕಲಾಪ ಪದೇ ಪದೇ ಮುಂದೂಡಲ್ಪಟ್ಟಿತ್ತು. 

ಸಂಸತ್ತಿನಿಂದ ಆರಂಭವಾದ ತಿರಂಗಾ ನಡಿಗೆ ವಿಜಯ್ ಚೌಕದ ಬಳಿ ಅಂತ್ಯಗೊಂಡಿತು. ಈ ನಡಿಗೆ ನಂತರ ಕನ್ಸಿಟ್ಯೂಷನ್ ಕ್ಲಬ್ ನಲ್ಲಿ ವಿಪಕ್ಷಗಳು ಸುದ್ದಿಗೋಷ್ಠಿ ನಡೆಯಲಿದೆ ಎನ್ನಲಾಗಿದೆ. ಈ ಮಧ್ಯೆ, ಲೋಕಸಭಾ ಸ್ಪೀಕರ್ ಇಂದು ಸಂಜೆ ಆಯೋಜಿಸಿರುವ ಚಹಾಕೂಟದಲ್ಲಿ ಕಾಂಗ್ರೆಸ್ ಸೇರಿದಂತೆ ಇತರ ಮೂರು ಪ್ರಮುಖ ರಾಜಕೀಯ ಪಕ್ಷಗಳು ಪಾಲ್ಗೊಳ್ಳಲುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!