ದೇಶ

2024ರಲ್ಲಿ 5 ರಾಜ್ಯಗಳು ದೇಶದ ಭವಿಷ್ಯವನ್ನು ನಿರ್ಧರಿಸಲಿವೆ: ರಾವತ್

Lingaraj Badiger

ಅಹ್ಮದ್‌ನಗರ: 2024ರ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಕರ್ನಾಟಕ, ಬಿಹಾರ ಮತ್ತು ಆಂಧ್ರ ಪ್ರದೇಶ, ಈ ಐದು ರಾಜ್ಯಗಳು ದೇಶದ ಭವಿಷ್ಯವನ್ನು ನಿರ್ಧರಿಸುವ ಮೂಲಕ ಅಧಿಕಾರ ಬದಲಾವಣೆಯಾಗಲಿದೆ ಎಂದು ಶಿವಸೇನಾ(ಯುಬಿಟಿ) ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಅವರು ಶುಕ್ರವಾರ ಹೇಳಿದ್ದಾರೆ.  
     
"2024ರ ನಂತರ ಖಂಡಿತವಾಗಿಯೂ ದೇಶದಲ್ಲಿ ಅಧಿಕಾರ ಬದಲಾವಣೆಯಾಗಲಿದೆ. ನಾನು ಇದನ್ನು ಅತ್ಯಂತ ಆತ್ಮವಿಶ್ವಾಸದಿಂದ ಹೇಳಬಲ್ಲೆ" ಎಂದು ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಆಪ್ತ ಸಂಜಯ್ ರಾವತ್ ಅವರು ಅಹ್ಮದ್‌ನಗರದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ಇದನ್ನು ಓದಿ: ಪ್ರಧಾನಿ ಮೋದಿಯ ಶೈಕ್ಷಣಿಕ ಅರ್ಹತೆ ಬಗ್ಗೆ ಸಂಸತ್ತು, ದೇಶ ತಿಳಿಯಲಿ: ಸಂಜಯ್ ರಾವತ್
        
ಹಿಂದೂ-ಮುಸ್ಲಿಂ ಗಲಭೆಗಳನ್ನು ಪ್ರಚೋದಿಸುವುದೇ ಭಾರತೀಯ ಜನತಾ ಪಕ್ಷದ "ನಿಜವಾದ ಶಕ್ತಿ" ಮತ್ತು ಚುನಾವಣಾ ಲಾಭಕ್ಕಾಗಿ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ವಾತಾವರಣವನ್ನು ಸೃಷ್ಟಿಸುತ್ತದೆ ಎಂದು ರಾವತ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.
        
ಚೀನಾದ "ಆಕ್ರಮಣ"ಗಳ ಹೊರತಾಗಿಯೂ ಕೇಂದ್ರ ಸರ್ಕಾರದ ಮೌನವನ್ನು ಪ್ರಶ್ನಿಸಿದ ರಾವತ್, ಚೀನಾ ದೇಶದೊಳಗೆ ಅತಿಕ್ರಮಣ ಮಾಡಿರುವುದರಿಂದ ಭಾರತ ಮತ್ತು ಚೀನಾ ನಡುವೆ ಉದ್ವಿಗ್ನ ವಾತಾವರಣ  ಸೃಷ್ಟಿಸಬಹುದು ಎಂದಿದ್ದಾರೆ.
       
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚೀನಾದ ಬಗ್ಗೆ ಒಂದೇ ಒಂದು ಮಾತನ್ನೂ ಆಡಿಲ್ಲ ಎಂದು ರಾವತ್ ಆರೋಪಿಸಿದ್ದಾರೆ.

SCROLL FOR NEXT