ಸಂಗ್ರಹ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿಂದು 6,050 ಹೊಸ ಕೇಸ್ ಪತ್ತೆ, 14 ಮಂದಿ ಸಾವು

ಭಾರತದಲ್ಲಿ ಕೊರೋನಾ ಸಾಂಕ್ರಾಮಿಕ ಪ್ರಮಾಣ ಮತ್ತೆ ಹೆಚ್ಚಾಗುತ್ತಿದ್ದು, ಶುಕ್ರವಾರ ಒಂದೇ ದಿನ 6,050 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ.

ನವದೆಹಲಿ: ಭಾರತದಲ್ಲಿ ಕೊರೋನಾ ಸಾಂಕ್ರಾಮಿಕ ಪ್ರಮಾಣ ಮತ್ತೆ ಹೆಚ್ಚಾಗುತ್ತಿದ್ದು, ಶುಕ್ರವಾರ ಒಂದೇ ದಿನ 6,050 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,45,104ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 53,0943ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 28,303ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,41,85,858ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 1,78,533 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ  92,25,04,138 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಜನರಿಗೆ 220,66,20,700 ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT