ಖರ್ಗೆ ಭೇಟಿ ಮಾಡಿದ ಸಿದು 
ದೇಶ

'ವಿಶ್ವಾಸಾರ್ಹತೆಗೆ ಮತ್ತೊಂದು ಹೆಸರು ಮಲ್ಲಿಕಾರ್ಜುನ ಖರ್ಗೆ': ಕಾಂಗ್ರೆಸ್ ಅಧ್ಯಕ್ಷರ ಭೇಟಿ ಮಾಡಿದ ನವಜೋತ್ ಸಿಂಗ್ ಸಿದ್ದು

ವಿಶ್ವಾಸಾರ್ಹತೆಗೆ ಮತ್ತೊಂದು ಹೆಸರೇ ಮಲ್ಲಿಕಾರ್ಜುನ ಖರ್ಗೆ ಎಂದು ಪಂಜಾಬ್ ರಾಜಕೀಯ ಮುಖಂಡ ನವಜೋತ್ ಸಿಂಗ್ ಹೇಳಿದ್ದಾರೆ.

ನವದೆಹಲಿ: ವಿಶ್ವಾಸಾರ್ಹತೆಗೆ ಮತ್ತೊಂದು ಹೆಸರೇ ಮಲ್ಲಿಕಾರ್ಜುನ ಖರ್ಗೆ ಎಂದು ಪಂಜಾಬ್ ರಾಜಕೀಯ ಮುಖಂಡ ನವಜೋತ್ ಸಿಂಗ್ ಹೇಳಿದ್ದಾರೆ.

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ  ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿಯಾದ ಒಂದು ದಿನದ ನಂತರ ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು(Navjot Singh Sidhu ) ಶುಕ್ರವಾರ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ  ಪಕ್ಷದ ಸಂವಹನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರನ್ನು ಭೇಟಿಯಾದರು.

  "9 ಬಾರಿ ಶಾಸಕ, ಮೂರು ಬಾರಿ ಸಂಸದ, ಹಿಂದುಳಿದವರ ಪರವಾಗಿ ಚಾಂಪಿಯನ್, ಸತ್ಯದ ಧ್ವನಿ... ವಿಶ್ವಾಸಾರ್ಹತೆ ಹೆಸರೇ ಮಲ್ಲಿಕಾರ್ಜುನ ಖರ್ಗೆ". ಕಾಂಗ್ರೆಸ್ ನ ಗೌರವಾನ್ವಿತ ಅಧ್ಯಕ್ಷರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದೇನೆ.  ಖರ್ಗೆ ಅವರು ಪಕ್ಷಕ್ಕೆ ಸಕಾರಾತ್ಮಕ ಕಂಪನ ಹಾಗೂ  ಅದೃಷ್ಟವನ್ನು ತರುತ್ತಾರೆ'' ಎಂದು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ನವಜೋತ್ ಸಿಂಗ್ ಸಿಧು ಬರೆದಿದ್ದಾರೆ.

ತನ್ನನ್ನು ಜೈಲಿಗೆ ಹಾಕಬಹುದು ಅಥವಾ ಬೆದರಿಸಬಹುದು. ಆದರೆ ಪಂಜಾಬ್ ಅಥವಾ ಅವರ ನಾಯಕರ ಮೇಲಿನ ಬದ್ಧತೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಗುರುವಾರ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿ ಮಾಡಿದ ನಂತರ ಸಿಧು ಹೇಳಿದ್ದಾರೆ.

 1988 ರ ರೋಡ್ ರೇಜ್ ಪ್ರಕರಣದಲ್ಲಿ ಜೈಲು ಶಿಕ್ಷೆಯನ್ನು ಪೂರ್ಣಗೊಳಿಸಿದ ನಂತರ ಸಿಧು ಅವರು ಎಪ್ರಿಲ್ 1 ರಂದು ಪಟಿಯಾಲಾ ಜೈಲಿನಿಂದ ಬಿಡುಗಡೆಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT