ಅಮಿತ್ ಶಾ 
ದೇಶ

ಪ್ರಜಾಪ್ರಭುತ್ವವಲ್ಲ. ಜಾತಿವಾದ, ಕುಟುಂಬವಾದ ಅಪಾಯದಲ್ಲಿರೋದು: ರಾಹುಲ್ ಗಾಂಧಿಗೆ ಟಾಂಗ್ ಕೊಟ್ಟ ಅಮಿತ್ ಶಾ

ಪ್ರಜಾಪ್ರಭುತ್ವವಲ್ಲ. ಜಾತಿವಾದ, ಕುಟುಂಬವಾದ ಅಪಾಯದಲ್ಲಿರೋದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಟಾಂಗ್ ಕೊಟ್ಟಿದ್ದಾರೆ.

ನವದೆಹಲಿ: ಪ್ರಜಾಪ್ರಭುತ್ವವಲ್ಲ. ಜಾತಿವಾದ, ಕುಟುಂಬವಾದ ಅಪಾಯದಲ್ಲಿರೋದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಟಾಂಗ್ ಕೊಟ್ಟಿದ್ದಾರೆ.

ಕೌಶಂಬಿ ಹಬ್ಬದ ಸಂದರ್ಭದಲ್ಲಿ ಉತ್ತರ ಪ್ರದೇಶದಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಕೋಟ್ಯಂತರ ಮೌಲ್ಯದ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಿದರು. ಉತ್ಸವವನ್ನು ಉದ್ಘಾಟಿಸಿದ ಬಳಿಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ ಬಗ್ಗೆ ಸಂಸತ್ತಿನ ಕಲಾಪಕ್ಕೆ ಅಡ್ಡಿಪಡಿಸಿದ ವಿರೋಧ ಪಕ್ಷಗಳನ್ನು ದೇಶ ಕ್ಷಮಿಸುವುದಿಲ್ಲ ಎಂದು ಪ್ರತಿಪಾದಿಸಿದರು.

ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಸರ್ಕಾರ) ತಂದ ಕಾನೂನಿನ ಆಧಾರದ ಮೇಲೆ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ ಎಂದು ಅಮಿತ್ ಶಾ ಹೇಳಿದರು. ಸಮಾಜದ ಎಲ್ಲಾ ವರ್ಗಗಳ ಸರ್ವತೋಮುಖ ಕಲ್ಯಾಣಕ್ಕಾಗಿ 2024ರಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡಬೇಕೆಂದು ಶಾ ಜನರಿಗೆ ಕರೆ ನೀಡಿದರು.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಜ್ಯ ಘಟಕದ ಅಧ್ಯಕ್ಷ ಭೂಪೇಂದ್ರ ಚೌಧರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಶಿಕ್ಷೆ ವಿಧಿಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮಾರ್ಚ್ 24 ರಂದು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು.

ದೇಶದ ಬಜೆಟ್ ಅಧಿವೇಶನದ ಬಗ್ಗೆ ಚರ್ಚೆ ನಡೆಸದೆ ಸಂಸತ್ತಿನ ಕಲಾಪವನ್ನು ಅಂತ್ಯಗೊಳಿಸಿದ್ದು ಸ್ವಾತಂತ್ರ್ಯದ ಇತಿಹಾಸದಲ್ಲಿ ಎಂದೂ ನಡೆದಿರಲಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ. ಪ್ರತಿಪಕ್ಷಗಳ ನಾಯಕರು ಸದನ ಕಲಾಪಕ್ಕೆ ಅವಕಾಶ ನೀಡಲಿಲ್ಲ. ಇದಕ್ಕೆ ಕಾರಣ ರಾಹುಲ್ ಗಾಂಧಿ ಅವರನ್ನು ಅನರ್ಹತೆ ಎಂದು ಅಮಿತ್ ಶಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT