ಸಂಗ್ರಹ ಚಿತ್ರ 
ದೇಶ

ನಾಪತ್ತೆಯಾಗಿದ್ದ 9 ವರ್ಷದ ಬಾಲಕಿಯ ಶವ ಕಟ್ಟಡದ ನೀರಿನ ತೊಟ್ಟಿಯಲ್ಲಿ ಪತ್ತೆ!

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಒಂಬತ್ತು ವರ್ಷದ ಬಾಲಕಿ ನಾಪತ್ತೆಯಾದ ಎರಡು ದಿನಗಳ ನಂತರ ಆಕೆಯ ಕೊಳೆತ ಶವವನ್ನು ಆಕೆಯ ಮನೆಯ ಸಮೀಪವಿರುವ ಕಟ್ಟಡದ ನೀರಿನ ಟ್ಯಾಂಕ್‌ನಿಂದ ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಥಾಣೆ(ಮಹಾರಾಷ್ಟ್ರ): ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಒಂಬತ್ತು ವರ್ಷದ ಬಾಲಕಿ ನಾಪತ್ತೆಯಾದ ಎರಡು ದಿನಗಳ ನಂತರ ಆಕೆಯ ಕೊಳೆತ ಶವವನ್ನು ಆಕೆಯ ಮನೆಯ ಸಮೀಪವಿರುವ ಕಟ್ಟಡದ ನೀರಿನ ಟ್ಯಾಂಕ್‌ನಿಂದ ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಿವಂಡಿ ತಹಸಿಲ್‌ನ ಬಾಲಕಿ ಏಪ್ರಿಲ್ 3ರಂದು ನಾಪತ್ತೆಯಾಗಿದ್ದಳು ಮತ್ತು ಆಕೆಯ ಶವ ಬುಧವಾರ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಿವಂಡಿಯ ಶಾಂತಿನಗರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು, 'ಬಾಲಕಿಯು ಅಮ್ಜಾದಿಯಾ ಶಾಲೆಯ ಬಳಿ ಇರುವ ಕಿರಾಣಿ ಅಂಗಡಿಯಲ್ಲಿ ಮೊಟ್ಟೆಗಳನ್ನು ಖರೀದಿಸಲು ತನ್ನ ಮನೆಯಿಂದ ಹೊರಹೋಗಿದ್ದಳು. ಆದರೆ, ಆಕೆ ಮನೆಗೆ ಹಿಂತಿರುಗಿರಲಿಲ್ಲ. ಆಕೆಯ ಕುಟುಂಬಸ್ಥರು ಸಾಕಷ್ಟು ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಹೀಗಾಗಿ ನಾಪತ್ತೆ ದೂರು ದಾಖಲಿಸಲಾಗಿತ್ತು.

ತನಿಖೆ ವೇಳೆ ಬಾಲಕಿಯ ಮೃತದೇಹ ಸ್ಥಳೀಯ ಕಟ್ಟಡವೊಂದರ ನೀರಿನ ತೊಟ್ಟಿಯಲ್ಲಿ ಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ದುರ್ವಾಸನೆ ಬರುತ್ತಿದ್ದುದನ್ನು ಗಮನಿಸಿದ ನಿವಾಸಿಗಳು ನೀರಿನ ತೊಟ್ಟಿಯನ್ನು ಪರಿಶೀಲಿಸಿದಾಗ ಮೃತದೇಹ ಕೊಳೆತ ಸ್ಥಿತಿಯಲ್ಲಿತ್ತು ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತದೇಹ ಪತ್ತೆಯಾದ ಬಳಿಕ ಪೊಲೀಸರು ಅಪಹರಣ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಶ್ವೇತ ಭವನದಲ್ಲಿ ಕ್ಸಿ ಜಿನ್ ಪಿಂಗ್- ಟ್ರಂಪ್ ಮಹತ್ವದ ಸಭೆ: AI ಮಾನವನ ನಿಯಂತ್ರಣದಲ್ಲಿರಬೇಕು; ಅಮೆರಿಕಕ್ಕೆ ಚೀನಾ ಆಗ್ರಹ!

'ಎನ್‌ಕೌಂಟರ್'ನಲ್ಲಿ ನನ್ನನ್ನು ಕೊಲ್ಲಬಹುದು: ಜೀವ ಭಯದಲ್ಲಿ ಸೋನಂ ವಾಂಗ್‌ಚುಕ್!

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್

ಲೀವರ್ ಕ್ಯಾನ್ಸರ್ ಗೆ 'ವೆಲ್ ಕಮ್' ಖ್ಯಾತಿಯ ಹಿರಿಯ ಬಾಲಿವುಡ್ ನಟ ಮುಷ್ತಾಕ್ ಖಾನ್ ಬಲಿ!