ಯೋಗಿ ಆದಿತ್ಯನಾಥ್ - ಪ್ರಧಾನಿ ಮೋದಿ 
ದೇಶ

ಪ್ರಧಾನಿ ಮೋದಿ, ಉತ್ತರ ಪ್ರದೇಶ ಸಿಎಂಗೆ ಕೊಲೆ ಬೆದರಿಕೆ: ಶಾಲಾ ಬಾಲಕನ ಬಂಧನ

ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿ ಮಾಧ್ಯಮ ಸಂಸ್ಥೆಗೆ ಇಮೇಲ್ ಕಳುಹಿಸಿದ ಆರೋಪದ ಮೇಲೆ ಲಖನೌದ ಶಾಲಾ ಬಾಲಕನನ್ನು...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿ ಮಾಧ್ಯಮ ಸಂಸ್ಥೆಗೆ ಇಮೇಲ್ ಕಳುಹಿಸಿದ ಆರೋಪದ ಮೇಲೆ ಲಖನೌದ ಶಾಲಾ ಬಾಲಕನನ್ನು ನೋಯ್ಡಾ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಹಾರ ಮೂಲದ 16 ವರ್ಷದ ಬಾಲಕನನ್ನು ಇಂದು ಬೆಳಗ್ಗೆ ಲಖನೌದ ಚಿನ್ಹಾಟ್ ಪ್ರದೇಶದಲ್ಲಿ ವಶಕ್ಕೆ ಪಡೆದು, ನೋಯ್ಡಾಗೆ ಕರೆತರಲಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ(ನೋಯ್ಡಾ) ರಜನೀಶ್ ವರ್ಮಾ ಹೇಳಿದ್ದಾರೆ.

"ಎಪ್ರಿಲ್ 5 ರಂದು ಇಲ್ಲಿನ ಸೆಕ್ಟರ್ 20 ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ. ನಂತರ ಈ ಕುರಿತು ತನಿಖೆ ಮಾಡಲಾಯಿತು ಮತ್ತು ಬೆದರಿಕೆ ಸಂದೇಶವನ್ನು ಒಳಗೊಂಡಿರುವ ಇಮೇಲ್ ಕಳುಹಿಸಿದವರನ್ನು ಪತ್ತೆಹಚ್ಚಲು ತಾಂತ್ರಿಕ ತಂಡಗಳನ್ನು ರಚಿಸಲಾಯಿತು" ಎಂದು ವರ್ಮಾ ತಿಳಿಸಿದ್ದಾರೆ.

"ತನಿಖೆಯ ಆಧಾರದ ಮೇಲೆ, ಇಮೇಲ್ ಕಳುಹಿಸಿದವರನ್ನು ಲಖನೌನ ಚಿನ್ಹಾಟ್ ಪ್ರದೇಶದಲ್ಲಿ ಪತ್ತೆಹಚ್ಚಲಾಗಿದೆ ಮತ್ತು ವಶಕ್ಕೆ ಪಡೆಯಲಾಗಿದೆ. ಕೊಲೆ ಬೆದರಿಕೆ ಸಂದೇಶ ಕಳುಹಿಸಿದ್ದು ಶಾಲಾ ಬಾಲಕ ಎಂದು ತಿಳಿದುಬಂದಿದೆ. ಈ ಬಾಲಕ 11ನೇ ತರಗತಿ ಪೂರ್ಣಗೊಳಿಸಿದ್ದು, 12ನೇ ತರಗತಿಗೆ ಪ್ರವೇಶ ಪಡೆದಿದ್ದಾನೆ" ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು