ಅತ್ಯಾಚಾರ 
ದೇಶ

ರಾಜಸ್ಥಾನ: ದಲಿತ ಮಹಿಳೆ ಮೇಲೆ ಅತ್ಯಾಚಾರ, ಕೊಲೆ: ದಹನ

ರಾಜಸ್ಥಾನದಲ್ಲಿ ದಲಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಹತ್ಯೆಗೈದು ದಹನ ಮಾಡಲಾಗಿದೆ.

ನವದೆಹಲಿ: ರಾಜಸ್ಥಾನದಲ್ಲಿ ದಲಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಹತ್ಯೆಗೈದು ದಹನ ಮಾಡಲಾಗಿದೆ. 30 ವರ್ಷದ ಮಹಿಳೆ ಈ ಹೀನ ಕೃತ್ಯಕ್ಕೆ ಬಲಿಯಾಗಿದ್ದು, ಶೇ.50 ರಷ್ಟು ಸುಟ್ಟ ಗಾಯಗಳಿಂದ ಮೃತಪಟ್ಟಿದ್ದಾರೆ. 

ಮಹಿಳೆಯ ಪತಿ ನೀಡಿರುವ ಮಾಹಿತಿಯ ಪ್ರಕಾರ, ಶಾಕೂರ್ ಖಾನ್ ಎಂಬಾತ ಮನೆಗೆ ನುಗ್ಗಿ ಏಕಾಂಗಿ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾನೆ, ಆಕೆಯ ಮೇಲೆ ಆಸಿಡ್ ಮಾದರಿಯ ಕೆಮಿಕಲ್ ಎರಚಿ ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಿದ್ದಾರೆ.

ಅತ್ಯಾಚಾರವೆಸಗಿದ ಖಾನ್ ಬಂಧನಕ್ಕೊಳಗಾಗಿದ್ದಾನೆ. ಆದರೆ ಪೊಲೀಸರು ತಮ್ಮೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. 

ಇಬ್ಬರು ಪೊಲೀಸ್ ಅಧಿಕಾರಿಗಳನ್ನು ವಜಾಗೊಳಿಸಬೇಕು, 1 ಕೋಟಿ ರೂಪಾಯಿ ಪರಿಹಾರ, ಕುಟುಂಬದ ಓರ್ವ ಸದಸ್ಯನಿಗೆ ಸರ್ಕಾರಿ ನೌಕರಿ ನೀಡಬೇಕೆಂದು ಸಂತ್ರಸ್ತೆಯ ಕುಟುಂಬ ಸದಸ್ಯರು ಆರೋಪಿಸಿದ್ದು, ಬೇಡಿಕೆ ಈಡೇರುವವರೆಗೂ ಎಂಡಿಹೆಚ್ ಆಸ್ಪತ್ರೆಯ ಶವಾಗಾರದಲ್ಲಿರುವ ಶವವನ್ನು ಪಡೆಯುವುದಿಲ್ಲ ಎಂದು ಹೇಳಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!