ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಕೊರೋನಾ ಉಲ್ಭಣ: ದೇಶದಲ್ಲಿಂದು 6,155 ಸೋಂಕು ಪತ್ತೆ, 31 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣಗಳ ಸಂಖ್ಯೆ!

ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,155 ಹೊಸ ಪ್ರಕರಣಗಳು ಪತ್ತೆಯಾಗಿವೆ.

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,155 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,51,259ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,954ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 31,194ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,41,89,111ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 1,09,378 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ  92,26,13,516 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಜನರಿಗೆ 220,66,22,663 ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ