ಅಜಿತ್ ಪವಾರ್ 
ದೇಶ

ಎನ್‌ಸಿಪಿಯಲ್ಲಿ ಏಕನಾಥ್‌ ಶಿಂಧೆ ಆಗ್ತಾರಾ ಅಜಿತ್‌ ಪವಾರ್‌?

ಶಿವಸೇನೆಯನ್ನು ಇಬ್ಭಾಗ ಮಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ನೇತೃತ್ವದ ಶಿವಸೇನೆ ಶಾಸಕರನ್ನು ಒಂದು ವೇಳೆ ಸುಪ್ರೀಂ ಕೋರ್ಟ್ ಅನರ್ಹಗೊಳಿಸಿದರೆ, ಮಹಾರಾಷ್ಟ್ರದ ಸಮ್ಮಿಶ್ರ ಸರ್ಕಾರ ಉಳಿಸಲು ಎನ್‌ಸಿಪಿ ನಾಯಕ ಅಜಿತ್ ಪವಾರ್...

ನವದೆಹಲಿ: ಶಿವಸೇನೆಯನ್ನು ಇಬ್ಭಾಗ ಮಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಶಾಸಕರನ್ನು ಒಂದು ವೇಳೆ ಸುಪ್ರೀಂ ಕೋರ್ಟ್ ಅನರ್ಹಗೊಳಿಸಿದರೆ, ಮಹಾರಾಷ್ಟ್ರದ ಸಮ್ಮಿಶ್ರ ಸರ್ಕಾರ ಉಳಿಸಲು ಎನ್‌ಸಿಪಿ ನಾಯಕ ಅಜಿತ್ ಪವಾರ್ ಮತ್ತೆ ಪಕ್ಷದಿಂದ ಹೊರನಡೆದು ಬಿಜೆಪಿಯೊಂದಿಗೆ ಕೈಜೋಡಿಸುವ ಸಾಧ್ಯತೆಯಿದೆ. 

2019ರಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ದಿಢೀರ್ ಪ್ರಮಾಣ ವಚನ ಸ್ವೀಕರಿಸಿ ಎಲ್ಲರನ್ನೂ ಅಚ್ಚರಿಗೆ ಮೂಡಿಸಿದ್ದ ಅಜಿತ್ ಪವಾರ್ ಈಗ ಮತ್ತೊಮ್ಮೆ ಅದೇ ರೀತಿಯ ಪ್ಲಾನ್ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಏಕನಾಥ್ ಶಿಂಧೆ ಮಾದರಿಯಲ್ಲಿ ಪಕ್ಷದಲ್ಲಿ ಬಂಡಾಯದ ಭಾವುಟ ಹಾರಿಸಿ ಉದ್ದೇಶದಿಂದ ಅಜಿತ್ ಪವಾರ್ ಅವರು ಎನ್‌ಸಿಪಿ ಶಾಸಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.

ಅಂತಹ ಯಾವುದೇ ಯೋಚನೆ ಮಾಡಿಲ್ಲ ಎಂದು ಅಜಿತ್ ಪವಾರ್ ಹೇಳಿದ್ದರೂ, ಎನ್‌ಸಿಪಿ ಶಾಸಕರು ಈ ಬೆಳವಣಿಗೆಯ ಬಗ್ಗೆ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶಿವಸೇನೆ ಇಬ್ಭಾಗ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮಹಾರಾಷ್ಟ್ರ ಆಡಳಿತ ಮೈತ್ರಿಕೂಟದಲ್ಲಿ ತೀರ್ಪಿನ ಬಗ್ಗೆ ಆತಂಕವಿದೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಾಂವಿಧಾನಿಕ ಪೀಠದ ಐವರು ನ್ಯಾಯಮೂರ್ತಿಗಳಲ್ಲಿ ಒಬ್ಬರಾದ ನ್ಯಾಯಮೂರ್ತಿ ಎಂ ಆರ್ ಷಾ ಅವರು ಮೇ 15ರಂದು ನಿವೃತ್ತರಾಗುತ್ತಿದ್ದು, ಅದಕ್ಕು ಮೊದಲು ಪ್ರಕರಣದ ಅಂತಿಮ ತೀರ್ಪು ನ್ಯಾಯಾಲಯದಿಂದ ಹೊರಬೀಳುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್