ಉಮೇಶ್ ಹತ್ಯೆ ಪ್ರಕರಣ: ಫೋರ್ಜರಿ ಮಾಡಿದ್ದ ಅತೀಕ್ ಅಹ್ಮದ್, ಆತನ ಪತ್ನಿ ವಿರುದ್ಧ ಪ್ರಕರಣ
ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೋರ್ಜರಿ ಮಾಡಿದ್ದ ಗ್ಯಾಂಗ್ ಸ್ಟರ್- ರಾಜಕಾರಣಿ ಅತೀಕ್ ಅಹ್ಮದ್ ಪತ್ನಿ ಶೈಸ್ತಾ ಪರ್ವೀಣ್ ಹಾಗೂ ಆತನ ಪುತ್ರ ಅಲಿ ವಿರುದ್ಧ ಪೊಲೀಸರು ಫೋರ್ಜರಿ ಪ್ರಕರಣ ದಾಖಲಿಸಿದ್ದಾರೆ.
ಪ್ರಯಾಗ್ ರಾಜ್: ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೋರ್ಜರಿ ಮಾಡಿದ್ದ ಗ್ಯಾಂಗ್ ಸ್ಟರ್- ರಾಜಕಾರಣಿ ಅತೀಕ್ ಅಹ್ಮದ್ ಪತ್ನಿ ಶೈಸ್ತಾ ಪರ್ವೀಣ್ ಹಾಗೂ ಆತನ ಪುತ್ರ ಅಲಿ ವಿರುದ್ಧ ಪೊಲೀಸರು ಫೋರ್ಜರಿ ಪ್ರಕರಣ ದಾಖಲಿಸಿದ್ದಾರೆ.
ಉಮೇಶ್ ಪಾಲ್ ಬಿಎಸ್ ಪಿ ಶಾಸಕ ರಾಜು ಪಾಲ್ ಅವರ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದರು. ಶನಿವಾರದಂದು ಎಫ್ಐಆರ್ ದಾಖಲಾಗಿದ್ದು, ಈ ಪ್ರಕರಣದಲ್ಲಿ ಇನ್ನೂ ಇಬ್ಬರನ್ನು ಮೊಹಮ್ಮದ್ ಸಬೀರ್ ಮತ್ತು ರಾಕೇಶ್ ಅಲಿಯಾಸ್ ನಾಕೇಶ್ ಅಲಿಯಾಸ್ ಲಾಲಾ ಅವರ ಹೆಸರುಗಳನ್ನು ಸೇರಿಸಲಾಗಿದೆ ಎಂದು ಪ್ರಯಾಗ್ ರಾಜ್ ಪೊಲೀಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉಮೇಶ್ ಪಾಲ್ ಹತ್ಯೆ ಪ್ರಕರಣದ ತನಿಖೆಯಲ್ಲಿ ರಾಕೇಶ್ ನ್ನು ವಿಚಾರಣೆಗಾಗಿ ಪೊಲೀಸರು ಬಂಧಿಸಿದ್ದರು. ತನಿಖೆ ವೇಳೆ ರಾಕೇಶ್, ಪರ್ವೀನ್ ನೀಡಿದ್ದ ಬ್ಯಾಗನ್ನು ಬಚ್ಚಿಟ್ಟಿರುವುದಾಗಿ ಹೇಳಿದ್ದ. ತರುವಾಯ, ಬ್ಯಾಗ್ ಅನ್ನು ವಶಪಡಿಸಿಕೊಳ್ಳಲಾಯಿತು ಮತ್ತು ಅಲಿ ಅವರ ಫೋಟೋ ಹೊಂದಿರುವ ಎರಡು ನಕಲಿ ಆಧಾರ್ ಕಾರ್ಡ್ಗಳು ಪತ್ತೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಒಂದು ಆಧಾರ್ ಕಾರ್ಡ್ನಲ್ಲಿ ಸಿದ್ದಿಕಿಯ ಮಗ ಸಬೀರ್ ಹೆಸರು ಇತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.