ಭೂಪಿಂದರ್ ಹೂಡಾ ಪ್ರಯಾಣಿಸುತ್ತಿದ್ದ ಎಸ್‌ಯುವಿ 
ದೇಶ

ಎಸ್‌ಯುವಿಗೆ ಡಿಕ್ಕಿ ಹೊಡೆದ ನೀಲಗಾಯ್; ಕಾಂಗ್ರೆಸ್ ನಾಯಕ ಭೂಪಿಂದರ್ ಹೂಡಾ ಅಪಾಯದಿಂದ ಪಾರು

ಹಿರಿಯ ಕಾಂಗ್ರೆಸ್ ನಾಯಕ ಭೂಪಿಂದರ್ ಸಿಂಗ್ ಹೂಡಾ ಭಾನುವಾರ ಹರಿಯಾಣದ ಹಿಸ್ಸಾರ್ ಜಿಲ್ಲೆಯ ಬರ್ವಾಲಾ ಬಳಿ ಹಾದುಹೋಗುತ್ತಿದ್ದಾಗ ಅವರಿದ್ದ ಎಸ್‌ಯುವಿಗೆ 'ನೀಲಗಾಯ್' ಡಿಕ್ಕಿ ಹೊಡೆದಿದೆ. ಅವರು ಯಾವುದೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಂಡೀಗಢ: ಹಿರಿಯ ಕಾಂಗ್ರೆಸ್ ನಾಯಕ ಭೂಪಿಂದರ್ ಸಿಂಗ್ ಹೂಡಾ ಭಾನುವಾರ ಹರಿಯಾಣದ ಹಿಸ್ಸಾರ್ ಜಿಲ್ಲೆಯ ಬರ್ವಾಲಾ ಬಳಿ ಹಾದುಹೋಗುತ್ತಿದ್ದಾಗ ಅವರಿದ್ದ ಎಸ್‌ಯುವಿಗೆ 'ನೀಲಗಾಯ್' ಡಿಕ್ಕಿ ಹೊಡೆದಿದೆ. ಅವರು ಯಾವುದೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

75 ವರ್ಷದ ನಾಯಕ ಕೆಲವು ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ರಸ್ತೆಯಲ್ಲಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡಿದ್ದ ನೀಲಗಾಯ್ ಹೂಡಾ ಅವರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಆದರೆ, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಮತ್ತು ವಾಹನದಲ್ಲಿದ್ದ ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ಹಿಸ್ಸಾರ್‌ನ ಪೊಲೀಸ್ ವರಿಷ್ಠಾಧಿಕಾರಿ ಗಂಗಾ ರಾಮ್ ಪುನಿಯಾ ದೂರವಾಣಿಯಲ್ಲಿ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದರು.

ಅವರನ್ನು ಸಂಪರ್ಕಿಸಿದಾಗ ಹೂಡಾ, 'ಪ್ರಾಣಿ ನಮ್ಮ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಆದರೆ, ಎಲ್ಲರೂ ಸುರಕ್ಷಿತವಾಗಿದ್ದಾರೆ. ನಾನು ನನ್ನ ಕಾರ್ಯಕ್ರಮಗಳನ್ನು ಮುಂದುವರೆಸುತ್ತಿದ್ದೇನೆ ಮತ್ತು ಕಾರ್ಯಕ್ರಮಕ್ಕಾಗಿ ಗ್ರಾಮಕ್ಕೆ ಹೋಗುತ್ತಿದ್ದೇನೆ' ಎಂದು ಅವರು ಹೇಳಿದರು.
ಹರಿಯಾಣ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಹೂಡಾ ನಂತರ ತಮ್ಮ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ಮುಂದುವರೆಸಿದರು.

ಈಮಧ್ಯೆ, ಘಟನೆಯ ನಂತರ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಹೂಡಾ ಅವರಿಗೆ ದೂರವಾಣಿ ಕರೆ ಮಾಡಿ ಅವರ ಯೋಗಕ್ಷೇಮವನ್ನು ವಿಚಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ