ನವದೆಹಲಿ: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಕರ್ನಾಟಕದಲ್ಲಿ ಉಳಿದಿರುವ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆ ನಡೆಸಿದರು.
ಈ ಸಭೆಯಲ್ಲಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ಭಾಗವಹಿಸಿದ್ದರು.
ಇನ್ನುಳಿದ ಪ್ರತಿ ಕ್ಷೇತ್ರಗಳ ಕುರಿತು ಸೂಕ್ಷ್ಮ ಚರ್ಚೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಈ ಹಿಂದೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿತ್ತು. ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳು ಮತ್ತು ಗುರುವಾರ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿತು. ಹೀಗಾಗಿ ಒಟ್ಟು 224 ಅಭ್ಯರ್ಥಿಗಳ ಪೈಕಿ 166 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ಎರಡನೇ ಪಟ್ಟಿಯಲ್ಲಿ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಏರ್ಪಟ್ಟಿದ್ದರೂ, ಕೇಂದ್ರ ಚುನಾವಣಾ ಸಮಿತಿಯ ಸಮನ್ವಯದಲ್ಲಿ ಅದನ್ನು ಅಂತಿಮಗೊಳಿಸಲು ರಾಜ್ಯ ನಾಯಕರು ದೆಹಲಿಯಲ್ಲಿ ಮೊಕ್ಕಾಂ ಹೂಡಿದ್ದಾರೆ.