ತಮಿಳುನಾಡು: ತೆಪ್ಪಕಾಡು ಕ್ಯಾಂಪ್ ನಲ್ಲಿ ಆನೆಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ- ವಿಡಿಯೋ
ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತಾರಣ್ಯಕ್ಕೆ ಭಾನುವಾರ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ತೆಪ್ಪಕಾಡು ಆನೆ ಶಿಬಿರದ ಆನೆಗಳಿಗೆ ಆಹಾರ ತಿನ್ನಿಸಿದರು.
ಮಧುಮಲೈ: ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತಾರಣ್ಯಕ್ಕೆ ಭಾನುವಾರ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ತೆಪ್ಪಕಾಡು ಆನೆ ಶಿಬಿರದ ಆನೆಗಳಿಗೆ ಆಹಾರ ತಿನ್ನಿಸಿದರು.
ಆಸ್ಕರ್ ಪ್ರಶಸ್ತಿ ವಿಜೇತ ದಿ ಎಲಿಪೆಂಟ್ ವಿಸ್ಪರ್ಸ್ ನ ಪ್ರಮುಖ ಸ್ಟಾರ್ ಗಳಾದ ಬೊಮ್ಮನ್ ಮತ್ತು ಬೆಳ್ಳಿ ದಂಪತಿಯೊಂದಿಗೆ ಸಂವಾದ ನಡೆಸಿದ ಮೋದಿ ಆನೆಯೊಂದಕ್ಕೆ ಕಬ್ಬನ್ನು ತಿನ್ನಿಸುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ಅಲ್ಲದೇ, ಹುಲಿ ಸಂರಕ್ಷಿತಾರಣ್ಯದ ಕ್ಷೇತ್ರ ನಿರ್ದೇಶಕರೊಂದಿಗೂ ಮೋದಿ ಸಂವಾದ ನಡೆಸಿದರು.
ಇದಕ್ಕೂ ಮುನ್ನಾ, ಕರ್ನಾಟಕದ ಬಂಡೀಪುರ ಹುಲಿ ಸಂರಕ್ಷಿತಾರಣ್ಯಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ, ಅಲ್ಲಿನ ಸಂರಕ್ಷಣೆಯ ಪ್ರಯತ್ನದಲ್ಲಿ ತೊಡಗಿರುವ ಮುಂಚೂಣಿ ಕ್ಷೇತ್ರ ಸಿಬ್ಬಂದಿ ಮತ್ತು ಸ್ವಸಹಾಯ ಗುಂಪುಗಳೊಂದಿಗೆ ಸಂವಾದ ನಡೆಸಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.